ಬೆಂಗಳೂರು,ಡಿಸೆಂಬರ್,1,2020(www.justkannada.in): ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನ ಒಂದು ದಿನ ಸಿಬಿಐ ಕಸ್ಟಡಿಗೆ ನೀಡಿ ಬೆಂಗಳೂರು ವಿಶೇಷ ಕೋರ್ಟ್ ಆದೇಶಿಸಿದೆ.
ಮಾಜಿ ಸಚಿವ ರೋಷನ್ ಬೇಗ್ ಅವರನ್ನು ನಾಳೆ(ಡಿಸೆಂಬರ್ 2)ಯವರೆಗೆ ಸಿಬಿಐ ಕಸ್ಟಡಿಗೆ ನೀಡಿ ಬೆಂಗಳೂರು ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಆದೇಶಿಸಿದ್ದಾರೆ. 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ಧ ಮಾಜಿ ಸಚಿವ ರೋಷನ್ ಬೇಗ್ ಆರೋಗ್ಯ ಸಮಸ್ಯೆದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿ ನಿನ್ನೆ ಜೈಲು ಸೇರಿದ್ದರು.
ಈ ನಡುವೆ ವಿಚಾರಣೆಗಾಗಿ ರೋಷನ್ ಬೇಗ್ ಅವರನ್ನ ತಮ್ಮ ಕಸ್ಟಡಿಗೆ ನೀಡುವಂತೆ ಸಿಬಿಐ ಅಧಿಕಾರಿಗಳು ಮನವಿ ಮಾಡಿದ್ದರು. ಸಿಬಿಐ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಬೇಗ್ ಅವರನ್ನು ಒಂದು ದಿನದ ಮಟ್ಟಿಗೆ ಸಿಬಿಐ ಕಸ್ಟಡಿಗೆ ನೀಡಿದೆ. ಹಾಗೆಯೇ ರೋಷನ್ ಬೇಗ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 4ಕ್ಕೆ ಮುಂದೂಡಿದೆ.
Key words: Former minister -Roshan Beg – CBI –custody-bail application -hearing.