ಬೆಂಗಳೂರು,ಡಿಸೆಂಬರ್,5,2020(www.justkannada.in): ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ರೋಶನ್ ಬೇಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ರೋಷನ್ ಬೇಗ್ ತನಿಖೆಗೆ ಸಹಕರಿಸಿದ್ದಾರೆ. ಅವರ ವಿರುದ್ಧದ ತನಿಖೆಯೂ ಮುಕ್ತಾಯವಾಗಿರುವುದರಿಂದ ಜಾಮೀನು ಮಂಜೂರು ಮಾಡುವಂತೆ ರೋಷನ್ ಬೇಗ್ ಪರ ವಕೀಲ ಶಶಿಕಿರಣ ಶೆಟ್ಟಿ ವಾದ ಮಂಡಿಸಿದ್ದರು.
ರೋಶನ್ ಬೇಗ್ ನ್ಯಾಯಾಲಯದ ಅನುಮತಿ ಇಲ್ಲದೆ ಬೇಗ್ ಬೆಂಗಳೂರನ್ನು ಬಿಟ್ಟು ಹೊರ ಹೋಗುವಂತಿಲ್ಲ. ಸಿಬಿಐ ತನಿಖೆಗೆ ಸಂಪೂರ್ಣವಾದ ಸಹಕಾರ ನೀಡಬೇಕು. ಅವರು ಪಾಸ್ಪೋರ್ಟ್ಅನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಬೇಕು. ಸಿಬಿಐ ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಶನ್ ಬೇಗ್ ಅವರನ್ನು ಸಿಬಿಐ ನವೆಂಬರ್ 22ರಂದು ಬಂಧಿಸಿತ್ತು. ರೋಷನ್ ಬೇಗ್ ನ್ಯಾಯಾಂಗ ಬಂಧನದಲ್ಲಿದ್ದರು.
Key words: Former Minister -Roshan Beg –granted- bail-cbi court