ಬೆಂಗಳೂರು,ಆಗಸ್ಟ್,5,2021(www.justkannada.in): ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಈ ಮಧ್ಯೆ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಇಡಿ ದಾಳಿಯಾಗಿದೆ.
ಐಎಂಎ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಬೆಳಿಗ್ಗೆಯೇ ಬೆಂಗಳೂರಿನ ಶಿವಾಜಿನಗರದಲ್ಲಿನ ರೋಷನ್ ಬೇಗ್ ಮನೆಯ ಮೇಲೆ ದಾಳಿ ನಡೆಸಿದೆ. ಅಕ್ರಮ ವಿದೇಶಿ ವ್ಯವಹಾರಗಳು ಕಂಡು ಬಂದ ಹಿನ್ನೆಲೆ, ರೋಷನ್ ಬೇಗ್‌ಗೆ ಸಂಬಂಧಿಸಿದ 6 ಕಡೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಇಡಿ ಅಧಿಕಾರಿಗಳು ಸಿಆರ್‌ಪಿಎಫ್ ಭದ್ರತೆ ನೇತೃತ್ವದಲ್ಲಿ ಬೆಂಗಳೂರಿನ ಶಿವಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದಾರೆ. ಇತ್ತೀಚೆಗೆ ಐಎಎಂ ಕೇಸ್ನಲ್ಲಿ ಬೇಗ್ ಆಸ್ತಿ ಜಪ್ತಿಗೆ ಹೈಕೋರ್ಟ್ ಆದೇಶಿಸಿತ್ತು.
ಐಎಂಎ ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಆರ್.ರೋಷನ್ ಬೇಗ್ಆರೋಪಿಯಾಗಿದ್ದಾರೆ. ಇವರ ಆಸ್ತಿ ಜಪ್ತಿಗೆ ಹೈಕೊರ್ಟ್ ಆದೇಶ ನೀಡಿತ್ತು. ಅದರಂತೆ ಇಂದು ಸರ್ಕಾರ ರೋಷನ್ ಬೇಗ್ ಆಸ್ತಿಯನ್ನು ಜಪ್ತಿಮಾಡಿದೆ. ಇನ್ನು ಶಿವಾಜಿನಗರ ಮನೆಯಲ್ಲೇ ಮಾಜಿ ಸಚಿವ ರೋಷನ್ ಬೇಗ್ ಅವರನ್ನ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
Key words: Former minister -Roshan Beg- house -attacked -ED officer.