ಬೆಂಗಳೂರು,ಜ,16,2020(www.justkannada.in): ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಬಲ್ಲೆ. ನನ್ನನ್ನ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಿ ಎಂದು ಹೇಳಿದ್ದ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ಕೊಟ್ಟರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆ.ಹೆಚ್ ಮುನಿಯಪ್ಪ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ನೀಡಿದರೂ ಒಟ್ಟಾಗಿ ಕೆಲಸ ಮಾಡ್ತೇವೆ. ಸೋನಿಯಾ ಗಾಂಧಿ ರಾಹುಲ್ ಗಾಂಧಿಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ ಹೈಕಮಾಂಡ್ ಬಳಿ ನನ್ನ ಪರ ನಾಯಕರು ಮಾತನಾಡಿದ್ದಾರೆ. ಈ ವಾರದೊಳಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಒಂದು ಪಕ್ಷದಲ್ಲಿ ಭಿನ್ನಾಭಿಪ್ರಾಯವಿರೋದು ಸಹಜ. ನಿನ್ನೆ ಹೈಕಮಾಂಡ್ ಅನ್ನ ಸಿದ್ಧರಾಮಯ್ಯ ಭೇಟಿಯಾಗಿ ಚರ್ಚಿಸಿದ್ದಾರೆ. ಆದರೆ ಅವರು ಯಾವ ವಿಚಾರದ ಬಗ್ಗೆ ಚರ್ಚಿಸಿದ್ದಾರೆ ಗೊತ್ತಿಲ್ಲ. ಹೈಕಮಾಂಡ್ ನೇಮಿಸಿದ ಅಧ್ಯಕ್ಷರ ಜತೆ ಕೆಲಸ ಮಾಡುತ್ತೇವೆ ಎಂದು ಕೆಹೆಚ್ ಮುನಿಯಪ್ಪ ತಿಳಿಸಿದರು.
Key words: Former MP -KH Muniyappa – KPCC president- High Command