ಬೆಂಗಳೂರು,ಜುಲೈ,25,2023(www.justkannada.in): ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗುವ ಸಾಧ್ಯತೆ ಇದೆ ಎಂದು ಚರ್ಚೆಯಾಗಿತ್ತು. ಆದರೆ ಇದಕ್ಕೆ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ತೆರೆ ಎಳೆದಿದ್ದಾರೆ.
ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿ ಈ ಬಗ್ಗೆ ಸ್ಪಷ್ಟನೆ ನೀಡಿದ ಹೆಚ್.ಡಿ ದೇವೇಗೌಡರು, ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸೀಟು ಗೆಲ್ಲುತ್ತೇವೆ ಗೊತ್ತಿಲ್ಲ. ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ. ನಾನು ಸಿಎಂ, ಪ್ರಧಾನಿ ಆದೆ, ಕುಮಾರಸ್ವಾಮಿ ಸೇರಿದಂತೆ ಅನೇಕರು ಸಿಎಂ ಆಗಿದ್ದಾರೆ. ಈ ಪಕ್ಷ ಅಳಿಸಿ ಹಾಕುತ್ತೇವೆ ಅಂದರೇ ಅದು ಸಾಧ್ಯವಿಲ್ಲ. ನಮ್ಮ 19 ಶಾಸಕರು, 7 ವಿಧಾನಪರಿಷತ್ ಸದಸ್ಯರ ಜೊತೆ ಕೂತು ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ. ಜಿ.ಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಕಮೀಟ ಮಾಡಿ, ಕಾರ್ಯಕ್ರಮ ರೂಪಿಸಲು ಸಲಹೆ ನೀಡಿದ್ದಾರೆ. ಲಕ್ಷಾಂತರ ಕಾರ್ಯಕರ್ತರ ಅಭಿಪ್ರಾಯ ಪಡೆದು ಒಂದು ಗೂಡಿಸುವ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ಸಿಎಂ ಸಿದ್ಧರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ಹೆಚ್.ಡಿ ದೇವೇಗೌಡರು, ಸಿದ್ದರಾಮಯ್ಯ ಅವರು ನೈತಿಕತೆ ಬಗ್ಗೆ ಮಾತನಾಡುತ್ತಾರೆ. ನೀವು ಮಾತನಾಡುವ ಮಾತು ಹೃದಯದ ಅಂತರಾಳದಿಂದ ಬರಬೇಕು. ಅಧಿಕಾರ ಬರುತ್ತೆ, ಹೋಗುತ್ತೆ. ನೈತಿಕತೆ ಮುಖ್ಯ ಎಂದು ಕಿಡಿಕಾರಿದರು.
Key words: Former PM- HD Deve Gowda – JDS-BJP -alliance – Lok Sabha- election