ಪಂಚಭೂತಗಳಲ್ಲಿ ಲೀನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ನವದೆಹಲಿ,ಡಿಸೆಂಬರ್,28,2024 (www.justkannada.in):  ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ  ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು.

ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ  ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿದ್ದು, ಸಿಂಗ್ ಅವರ ಚಿತೆಗೆ ಪುತ್ರಿ ಧಮನ್ ಸಿಂಗ್ ಅಗ್ನಿಸ್ಪರ್ಶ ಮಾಡಿದರು. ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು.

ಅಂತ್ಯಕ್ರಿಯೆ ವೇಳೆ  ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್,  ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ,  ಜೆಪಿ ನಡ್ಡಾ ಸೇರಿದಂತೆ ರಾಜ್ಯ ಹಾಗೂ ಕೇಂದ್ರದ ಹಲವು ರಾಜಕೀಯ ನಾಯಕರು ಉಪಸ್ಥಿತರಿದ್ದರು.

Key words: Former PM, Manmohan Singh, Funeral