ಬೆಂಗಳೂರು,ಫೆಬ್ರವರಿ,28,2023(www.justkannada.in): ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರು ಬೆಳಗ್ಗೆ 10.30ಕ್ಕೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಕಾಲುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ದೇವೇಗೌಡರು ಆಸ್ಪತ್ರೆಗೆ ತೆರಳುವ ಬಗ್ಗೆ ಇಂದು ಬೆಳಿಗ್ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದರು. ದೇವೇಗೌಡರು ಇಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ನೀಡಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಇದೀಗ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.
Key words: Former Prime Minister -HD Deve Gowda -admitted – hospital.