ಬೆಂಗಳೂರು,ಅಕ್ಟೋಬರ್,8,2021(www.justkannada.in): ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾನು ಆರ್‌ಎಸ್‌ಎಸ್ ಬಗ್ಗೆ ಹೊಗಳಿದ್ದೇನೆ ಎನ್ನುವುದು ಅಪ್ಪಟ ಸುಳ್ಳು ,ಆಡ್ವಾಣಿ ಬಂದಾಗ ನಾವು ಸಮಾಲೋಚನೆ ಮಾಡಿದ್ದೆವು ,ಎಮರ್ಜೆನ್ಸಿ ಸಮಯದಲ್ಲಿ ಜೈಲಿಗೆ ಹೋಗಿದ್ದರ ಬಗ್ಗೆ ಮಾತನಾಡಿದ್ದೆವು. ಬಾಂಕ್ವೆಟ್ ಹಾಲ್ ನಲ್ಲಿ ಒಂದು ಕಾರ್ಯಕ್ರಮ ನಡೆದಿತ್ತು. ನಾನೇ ಬಾಂಕ್ವಟ್ ಹಾಲ್ ಅನುಮತಿ ನೀಡಿದ್ದೆ. ನನ್ನ ಅಧ್ಯಕ್ಷತೆಯಲ್ಲಿಯೇ ಕಾರ್ಯಕ್ರಮ ನಡೆದಿತ್ತು. ನಾನು ಆ ಸಭೆಯಲ್ಲೇ ಹೇಳಿದ್ದೆ, ಸಭೆಯನ್ನು ದುರುಪಯೋಗ ಮಾಡುವುದು ಸರಿಯಲ್ಲ ಎಂದಿದ್ದೆ. ನಾವು ತುರ್ತುಪರಿಸ್ಥಿತಿಗೆ ಬೆಂಬಲಿಸುತ್ತೇವೆ ಎಂದು ಹೇಳಿ ಅನೇಕರು ಬರೆದುಕೊಟ್ಟರು. ನನಗೂ ಆರ್ ಎಸ್ಎಸ್ ಗೂ ಏನ್ ಸಂಬಂಧ ಇದೆ ಆರ್ ಎಸ್ ಎಸ್ ಬಗ್ಗೆ ನನಗೆ ಗಂಧ ಗಾಳಿ ಗೊತ್ತಿಲ್ಲ, ಸುಮ್ಮನೆ ಸುಳ್ಳು ಹೇಳುವುದನ್ನು ಬಿಡಬೇಕು. ಕಾಂಗ್ರೆಸ್ ಸ್ಥಿತಿ ಎಲ್ಲಿಂದ ಎಲ್ಲಿಗೆ ಬರ್ತಾ ಇದೆ ಅಂತ ಗೊತ್ತಿದೆ. ಜವಹಾರ್ ಲಾಲ್ ನೆಹರು ಅವರ ನಂತರ ಕಾಲದಿಂದ ಕಾಲಕ್ಕೆ ಯಾವ ಯಾವ ರಾಜ್ಯದಲ್ಲಿ ಎಲ್ಲಿಗೆ ಬಂದಿದೆ ಅಂತ ಎಲ್ಲರಿಗೂ ಗೊತ್ತಿದೆ. ನನ್ನನ್ನು ಕೆಣಕಲು ಹೋಗಬೇಡಿ ಕೆಣಕಿದರೆ ಸರಿ ಇರಲ್ಲ ಎಂದು ಮಾಜಿ ಪ್ರಧಾನಿ ದೇವೆಗೌಡ ಅವರು ಕಾಂಗ್ರೆಸ್ ವಿರುದ್ಧ ಗುಡುಗಿದರು.
ಇಂದು ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೆಗೌಡ, ಏಳು ದಿನ ಕಾರ್ಯಾಗಾರ ಮಾಡಿದ್ದವು. ಕಾರ್ಯಾಗಾರದಲ್ಲಿ ಹಾಲಿ ಹಾಗೂ ಮಾಜಿ ಶಾಸಕರು ,ಪರಿಷತ್ ಸದಸ್ಯರು ಭಾಗಿಯಾಗಿದ್ದರು. ನಾನು ಕೂಡ ಕಾರ್ಯಾಗಾರದಲ್ಲಿ ಏಳು ದಿನ ಭಾಗಿಯಾಗಿದ್ದೆ. ಕಾರ್ಯಾಗಾರದಲ್ಲಿ ಕುಮಾರಸ್ವಾಮಿ ಪಂಚರತ್ನ ಯೋಜನೆ ಬಗ್ಗೆ ತಿಳಿಸಿದ್ದಾರೆ. ಈ ಕಾರ್ಯಕ್ರಮ ಬಗ್ಗೆ ಅವರೊಬ್ಬರೇ ಆಲೋಚಿಸಿ ಮಾಡಿದ್ದಾರೆ. ಕುಮಾರಸ್ವಾಮಿ ಅವರೆ ಸ್ವತಃ ಈ ಕಾರ್ಯಕ್ರಮ ಮಾಡಿದ್ದಾರೆ ಇದು ತುಂಬಾ ಉತ್ತಮವಾದ ಕಾರ್ಯಕ್ರಮ. ಹೆಚ್.ಡಿಕೆ ಮಿಷನ್ 123 ಕಾರ್ಯಕ್ರಮ ಮಾಡಿದ್ರು. 2023 ಕ್ಕೆ ನಮ್ಮ ಪಕ್ಷಕ್ಕೆ ಶಕ್ತಿ ನೀಡಿದರೆ ಈ ಪಂಚರತ್ನ ಕಾರ್ಯಕ್ರಮವನ್ನು ಕೊಡುತ್ತೇನೆ ಎಂದು ತಿಳಿಸಿದ್ದಾರೆ ಎಂದರು.
ನಾನು ಖರ್ಗೆಯನ್ನೇ ಸಿಎಂ ಮಾಡಿ ಎಂದಿದ್ಧೆ.
ನಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ 25 ಸಾವಿರ ಕೋಟಿ ಸಾಲಮನ್ನ ಮಾಡುತ್ತೆನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಈ ಮನುಷ್ಯ ಹೇಗೆ ಮಾಡುತ್ತಾನೆ ಎಂದು ಅನ್ನಿಸುತ್ತಿತ್ತು. ವಿಧಿಯಾಟ ಬೇರೆ ಬಿಜೆಪಿ 106, ಕಾಂಗ್ರೆಸ್ 78 ಜೆಡಿಎಸ್ 37 ಬಂತು , ನಿಚ್ಚಳ ಬಹುಮತ ಕಳೆದ ಬಾರಿ ಯಾರಿಗೂ ಬರಲಿಲ್ಲ. ಆಗ ನಾನು ಖರ್ಗೆ ಅವರನ್ನು ಸಿಎಂ ಮಾಡಿ ಎಂದು ಸೋನಿಯಾ ಗಾಂಧಿಗೆ ಹೇಳಿದ್ದೇ. ಕಾಂಗ್ರೆಸ್ ಗೆ ಹೆಚ್ಚು ಸೀಟುಗಳು ಬಂದಿದೆ ನಾವು ಮುಖ್ಯಮಂತ್ರಿ ಸ್ಥಾನ ಪಡೆದರೆ ಅಭಾಸ ಆಗುತ್ತದೆ. ಹೀಗಾಗಿ ಖರ್ಗೆ ಅವರನ್ನೇ ಸಿಎಂ ಮಾಡಿ ಎಂದಿದ್ದೆ. ಖರ್ಗೆಯವರು ಕೂಡ ಅದಕ್ಕೆ ಒಪ್ಪಿದ್ದರು. ಸೋನಿಯಾಗಾಂಧಿಗೆ ಒಪ್ಪಿಸುತ್ತೇನೆ ಎಂದು ಗುಲಾಮ್ ನಬಿ ಆಜಾದ್ ಕೂಡ ಹೇಳಿದ್ದರೂ ಆದರೆ ಮತ್ತೆ ಅವರೇ ಬಂದು ಕುಮಾರಸ್ವಾಮಿ ಸಿಎಂ ಆಗಬೇಕೆಂದು ನಮ್ಮನ್ನು ಒಪ್ಪಿಸಿದರು ಎಂದು ಹೆಚ್.ಡಿ ದೇವೇಗೌಡ ವಿವರಿಸಿದರು.
106 ಸೀಟು ಇಟ್ಟುಕೊಂಡಿದ್ದ ಯಡಿಯೂರಪ್ಪ ವಿಪಕ್ಷ ನಾಯಕ ಆದರು ,ಸಾಲಮನ್ನಾ ಮಾಡುತ್ತಿರಾ ಇಲ್ವಾ ಎಂದು ಏಕವಚನದಲ್ಲೇ ಮಾತನಾಡಿದ್ದರು ಯಡಿಯೂರಪ್ಪ ಅವರು ಏಕವಚನದಲ್ಲಿ ಮಾತನಾಡಿದ್ದನ್ನು ಟಿವಿಯಲ್ಲೇ ನೋಡಿದ್ದೆ. ಬಜೆಟ್ ವಿಷಯದಲ್ಲಿ ಕೂಡ ಸಿದ್ದರಾಮಯ್ಯ ಷರತ್ತುಹಾಕಿದ್ದರು ಸಿದ್ದರಾಮಯ್ಯ ಅವರ ಎಲ್ಲ ಭಾಗ್ಯಗಳನ್ನು ಮುಂದುವರಿಸಲು ಷರತ್ತು ಹಾಕಿದ್ದರು. ಸಿದ್ದರಾಮಯ್ಯ ಅವರ ಎಲ್ಲಾ ಷರತ್ತಿನ ಜೊತೆಗೆ ಕುಮಾರಸ್ವಾಮಿ ಸಾಲಮನ್ನಾ ಮಾಡಿದರು. ಕುಮಾರಸ್ವಾಮಿ ಆರ್ಥಿಕ ತಜ್ಞ ಏನಲ್ಲ. ಸಿದ್ದರಾಮಯ್ಯ ಹಾಗೆ ಸಾಕಷ್ಟು ಬಾರಿ ಬಜೆಟ್ ಮಂಡಿಸಿಲ್ಲ. ಆದರೆ ಸಂಪನ್ಮೂಲ ಕ್ರೋಢೀಕರಿಸಿ ಯೋಜನೆ ತಂದರು. ಹಿಂದಿನ ಎಲ್ಲ ಯೋಜನೆಗಳಿಗೆ ಹಣ ಹೊಂದಿಸಿದರು. ಹೇಳಿದ ಮಾತನ್ನು ಕುಮಾರಸ್ವಾಮಿ ಮಾಡುತ್ತಾರೆ ಎಂಬುದನ್ನು ಸಾಬೀತು ಪಡಿಸಿದರು ಎಂದು ಹೆಚ್.ಡಿಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಉಪಚುನಾವಣೆಗೆ ಜೆಡಿಎಸ್ ಮುಸ್ಲೀಂ ಅಭ್ಯರ್ಥಿ ಬಗ್ಗೆ ಕಾಂಗ್ರೆಸ್ ಟೀಕೆಗೆ ತಿರುಗೇಟು.
ಉಪಚುನಾವಣೆಗೆ ಜೆಡಿಎಸ್ ಮುಸ್ಲೀಂ ಅಭ್ಯರ್ಥಿ ಬಗ್ಗೆ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಹೆಚ್.ಡಿ ದೇವೇಗೌಡರು, ಹಾನಗಲ್ ಹಾಗೂ ಸಿಂದಗಿಯಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವಿ. ಬಸವ ಕಲ್ಯಾಣದಲ್ಲೂ ಮುಸ್ಲಿಂ ಅಭ್ಯರ್ಥಿ ಹಾಕಿದ್ದೆ. ನಾರಾಯಣರಾವ್ ಕೂಡ ನನ್ನ ಶಿಷ್ಯ. ಜಾತಿ ನೋಡಿ ನಾನು ಬೆಳೆಸಲಿಲ್ಲ , ಯಾರನ್ನೆಲ್ಲ ಬೆಳೆಸಿದ್ದೇನೆ ಎಂದು ಹೇಳಲ್ಲ. ಬಸವಕಲ್ಯಾಣದಲ್ಲಿ 50ಸಾವಿರ ಮುಸ್ಲಿಂ ಮತಗಳಿವೆ. ಹೀಗಾಗಿ ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವೆ. ಅದಕ್ಕೂ ಮುನ್ನ ಖೂಬಾಗೆ ಟಿಕೆಟ್ ಆಫರ್ ಮಾಡಿದ್ದೆ. ಆದರೆ ಖೂಬಾ ಪಕ್ಷೇತರ ಅಭ್ಯರ್ಥಿ ಆಗುತ್ತೇನೆ ಎಂದಿದ್ದರು. ಸಿಂಧಗಿಯಲ್ಲಿ ಮೊದಲು ಮನಗೊಳಿಗೆ ರಾಜಕೀಯವಾಗಿ ಅವಕಾಶ ಕೊಟ್ಟಿದ್ದೆ ನಾನು. ಆದರೆ ಇವತ್ತು ಅವರ ಮಗ ಕಾಂಗ್ರೆಸ್ ಗೆ ಹೋಗಿದ್ದಾರೆ. ಮನೆ ಮಗನಂತೆ ಬೆಳಸಿಕೊಂಡು ಬಂದೆ. ಸಂಕಷ್ಟದಲ್ಲೂ ಮಂತ್ರಿ ಮಾಡಿದೆವು. ಮನಗೂಳಿ ಕಾಲವಾದ ನಂತರ ಅವರ ಮಗನನ್ನು ಕಾಂಗ್ರೆಸ್ ಕರೆದುಕೊಂಡು ಹೋದರು. ನಿಮಗೆ ನಮ್ಮ ಅಭ್ಯರ್ಥಿಯೇ ಬೇಕಾ? ಎಂದು ಹೆಚ್.ಡಿಡಿ ಕಿಡಿಕಾರಿದರು.
ನಾನು ಬೆಳಸಿದ್ದ ಮುಸ್ಲಿಂ ಮುಖಂಡ ಈಗ ಅವರ ಬಲಗೈ ಶಕ್ತಿ ಕೊಟ್ಟವರು.
ಬಿಜೆಪಿ ಅಭ್ಯರ್ಥಿ ಗಾಣಿಗ ಸಮುದಾಯ ಇದೆ. ನಮ್ಮ ಅಭ್ಯರ್ಥಿಯನ್ನು ಹೊತ್ತುಕೊಂಡು ಹೋದರೆ ನಾವು ಸುಮ್ಮನಿರಬೇಕಾ ಹೀಗಾಗಿ ನಾವು ನಮ್ಮ ಅಭ್ಯರ್ಥಿ ಹಾಕಿದ್ದೇವೆ. ಬಿಜೆಪಿ ಗೆಲ್ಲಿಸಲು ಮುಸ್ಲಿಂ ಅಭ್ಯರ್ಥಿ ಹಾಕಿಲ್ಲ. ಮುಸ್ಲಿಂರನ್ನು ನೀವು ಗುತ್ತಿಗೆ ಪಡೆದಿಲ್ಲ. ನಾನು ಬೆಳಸಿದ್ದ ಮುಸ್ಲಿಂ ಮುಖಂಡ ಈಗ ಅವರ ಬಲಗೈ ಶಕ್ತಿ ಕೊಟ್ಟವರು ಎಂದು ಶಾಸಕ ಜಮೀರ್ ವಿಷಯ ಪ್ರಸ್ತಾಪಿಸಿ ಹೆಚ್ ಡಿ ದೇವೇಗೌಡರು ಚಾಟಿ ಬೀಸಿದರು.
Key words: Former Prime Minister -HD Deve Gowda – against -Congress.
ENGLISH SUMMARY…
‘Don’t irk me and make me wild’: Former PM HDD
Bengaluru, October 8, 2021 (www.justkannada.in): Former Prime Minister H.D. Devegowda today expressed his ire upon the Congress party and has lambasted the Congress leaders.
“The allegations that I have lauded the RSS is completely false. During Advani’s visit, we had just discussed, we had talked about the incident of going to jail during the emergency. There was a program held at the banquet hall, I myself had given permission to conduct the program. It was held under my leadership. I had told in that meeting that it is not correct to misuse the meeting. Many had given in writing supporting the emergency. In what way am I connected to RSS. I don’t know anything about it. I ask them to stop spreading lies. I know in what situation the Congress party is present. Everyone knows about the situation of the Congress party in the country after Jawaharlal Nehru. Don’t irk me, otherwise, you will have to face the consequences,” he said.
The former PM spoke at a press meet held at the JP Bhavan in Bengaluru today. He said that the JDS had conducted a seven-day party workshop with the participation of present and former MLAs, MLCs. “I also participated all seven days. H.D. Kumaraswamy has revealed the five-point program in the workshop. He is the sole brainchild behind it. He has developed the program all by himself, which is in fact a very good program. HDK also conducted the Mission 123 program. He has assured the people of the state that if the people give us power he would implement the five-point program,” he informed.
Keywords: Former Prime Minister H.D. Devegowda/ H.D. Kumaraswamy/ Congress party