ವಿಧಾನಸಭಾ ಮಾಜಿ ಸ್ಪೀಕರ್ ಕೃಷ್ಣ ಇನ್ನಿಲ್ಲ..

ಮೈಸೂರು,ಮೇ,21,2021(www.justkannada.in):  ಮಾಜಿ ಸ್ಪೀಕರ್ ಕೃಷ್ಣ  ಅವರು ಇಂದು ಮಧ್ಯಾಹ್ನ ನಿಧನರಾದರು.jk

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸ್ಪೀಕರ್ ಕೃಷ್ಣ ಮೈಸೂರಿನ ಕುವೆಂಪುನಗರ ಅನಿಕೇತನ ರಸ್ತೆಯಲ್ಲಿರುವ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ಮಾಜಿ ಸ್ಪೀಕರ್ ಕೃಷ್ಣ ಅವರು ಲಿವರ್ ಕ್ಯಾನ್ಸರ್ ಗೆ ತುತ್ತಾಗಿ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಮಧ್ಯೆ ಚಿಕಿತ್ಸೆಗೆ ಸ್ಪಂದಿಸದ ಕಾರಣ ಮಾಜಿ ಸ್ಪೀಕರ್ ಕೃಷ್ಣ ಮನೆಗೆ ವಾಪಸ್ಸ್ ಕರೆತರಲಾಗಿತ್ತು. ಇದೀಗ ಇಂದು ನಿವಾಸದಲ್ಲೇ ಕೃಷ್ಣ ಅವರು ನಿಧನರಾಗಿದ್ದಾರೆ.

ಕೆ.ಆರ್.ಪೇಟೆ ಕೃಷ್ಣ ಅವರು ಧರ್ಮಸಿಂಗ್ ಮತ್ತು ಹೆಚ್.ಡಿ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ನಿಂದ ಸ್ಪೀಕರ್ ಆಗಿ ನೇಮಕಗೊಂಡಿದ್ದರು.  ಕೊನೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಮೂರು ಬಾರಿ ಎಂಎಲ್ ಎ, ಒಂದು ಬಾರಿ ಎಂಪಿ ಆಗಿದ್ದ ಕೃಷ್ಣ ಅವರು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಕೆಲಸ ಮಾಡಿದ್ದರು. ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಮಾದೇಗೌಡರ ಸೋಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

 

 

former-speaker-krishna-passes-away

 

ಇನ್ನು ಮಾಜಿ ಸ್ಪೀಕರ್ ಕೃಷ್ಣ ಅವರ ಅಂತ್ಯಕ್ರಿಯೆ  ನಾಳೆ ಬೆಳಗ್ಗೆ 11 ಗಂಟೆಗೆ ಸ್ವಗ್ರಾಮ ಕೆ.ಆರ್.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿಯಲ್ಲಿ ನಡೆಯಲಿದೆ.

 

Key words” Former Speaker -Krishna -passes away