ಡಿಕೆ ಸುರೇಶ್ ಹೆಸರೇಳಿ ವಂಚನೆ ಕೇಸ್: ಐಶ್ವರ್ಯಗೌಡ ಮತ್ತು ಪತಿ ಬಂಧನ

ಬೆಂಗಳೂರು,ಡಿಸೆಂಬರ್,28,2024 (www.justkannada.in):  ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್​ ಮಾಲೀಕರಿಗೆ ವಂಚನೆ ಮಾಡಿದ ಆರೋಪ ಪ್ರಕರಣ ಸಂಬಂಧ ಐಶ್ವರ್ಯಗೌಡ ಮತ್ತು ಅವರ ಪತಿಯನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಸಂಬಂಧ ಇಂದು ಐಶ್ವರ್ಯ ಗೌಡ ಚಂದ್ರಾ ಲೇಔಟ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಐಶ್ವರ್ಯ ಗೌಡ ಮತ್ತು ಪತಿ ಹರೀಶ್ ರನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗುತ್ತಿದೆ.

ನಾನು ಡಿ ಕೆ ಸುರೇಶ್  ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ  ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.   ಐಶ್ವರ್ಯ ಗೌಡ  ಎಂಬ ಮಹಿಳೆ 8.41 ಕೋಟಿ ರೂಪಾಯಿ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್​ ಮಾಲೀಕರು ದೂರು ನೀಡಿದ್ದರು.

Key words: DK Suresh, name, fraud case,  Aishwarya Gowda, arrested