ಬೆಂಗಳೂರು,ಫೆಬ್ರವರಿ,3,2025 (www.justkannada.in): ಮಾಜಿ ಸಂಸದ ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ವಂಚನೆ ಮಾಡಿದ ಆರೋಪ ಪ್ರಕರಣ ಸಂಬಂದ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಐಶ್ವರ್ಯಗೌಡ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಐಶ್ವರ್ಯಗೌಡ ಹಾಗೂ ಪತಿ ಹರೀಶ್ ಅವರು ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ನೆಪದಲ್ಲಿ ಎಸಿಪಿ ಭರತ್ ರಿಂದ ಕಿರುಕುಳವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಮಾಜಿ ಸಂಸದ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಐಶ್ವರ್ಯ ಗೌಡ ವಿರುದ್ದ ಎಫ್ ಐಆರ್ ದಾಖಲಾಗಿತ್ತು.
Key words: Fraud case, Aishwarya Gowda, High Court, FIR