ಬೆಂಗಳೂರು, ಸೆಪ್ಟೆಂಬರ್ 14,2023(www.justkannada.in): ಎಂಎಲ್ಎ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತವಾಗಿರುವ ಚೈತ್ರ ಕುಂದಾಪುರ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಸಿಬಿ ಕಚೇರಿ ಮುಂದೆ ಪೊಲೀಸ್ ವಾಹನದಿಂದ ಕೆಳಗಡೆ ಇಳಿಯುತ್ತಿದ್ದಂತೆ ಮಾಧ್ಯಮಗಳಿಗೆ ಕ್ಯಾಮೆರಾ ಮುಂದೆ ಮಾತನಾಡಿದ ಚೈತ್ರಾ ಕುಂದಾಪುರ, ಸ್ವಾಮೀಜಿ ಬಂಧನವಾಗಲಿ ಆಗ ಎಲ್ಲ ಸತ್ಯ ಹೊರಗಡೆ ಬರುತ್ತದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಮಾಹಿತಿ ಬಿಚ್ಚಿಟ್ಟಿದ್ದಾರೆ.
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರ ಕುಂದಾಪುರ 7 ಕೋಟಿ ರೂ ವಂಚಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಗಗನ್ ಕಡೂರು, ಮೋಹನ್ ಕುಮಾರ್ ಅಲಿಯಾಸ್ ರಮೇಶ್ ಮತ್ತು ಗ್ಯಾಂಗ್ ಜತೆ ಸೇರಿಕೊಂಡು ಉದ್ಯಮಿ ಬಳಿಯಿಂದ ಬರೋಬ್ಬರಿ 7 ಪಡೆದು ವಂಚಿಸಿದ್ದಾರೆ ಎನ್ನಲಾಗಿದ್ದು, ಪ್ರಕರಣ ಸಂಬಂಧ ಚೈತ್ರ ಕುಂದಾಪುರರನ್ನ ಬಂಧಿಸಿದ್ಧ ಸಿಸಿಬಿ ಪೊಲೀಸರು ನಿನ್ನೆ ಕೋರ್ಟ್ ಗೆ ಹಾಜರುಪಡಿಸಿದ್ದರು. ನಂತರ ಕೋರ್ಟ್ ಚೈತ್ರಕುಂದಾಪುರರನ್ನ ಸಿಸಿಬಿ ಪೊಲೀಸರ ವಶಕ್ಕೆ ನೀಡಿದೆ.
Key words: Fraud – MLA – BJP- ticket-Chaitra Kundapur