ಬೆಂಗಳೂರು,ಡಿಸೆಂಬರ್,10,2020(www.justkannada.in) : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2020-21ನೇ ಶೈಕ್ಷಣಿಕ ಚಟುವಟಿಕೆಗಳಿಗಾಗಿ ನವೆಂಬರ್ 17ರಿಂದ ಡಿ.10ರವರೆಗೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ನೀಡಿದ್ದ ಅವಕಾಶವನ್ನು ಮುಂದುವರಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ರಾಜ್ಯದ ವಿಶ್ವವಿದ್ಯಾಲಯಗಳು,ಖಾಸಗಿ ವಿಶ್ವವಿದ್ಯಾಲಯ, ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ತಾಂತ್ರಿಕ, ವೈದ್ಯಕೀಯ ಕಾಲೇಜು, ಅನುದಾನ, ಅನುದಾನ ರಹಿತ ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ಚಟುವಟಿಕೆಗ ದೃಷ್ಟಿಯಿಂದ 2019-20ನೇ ಸಾಲಿನ ಪಾಸಿನ ಆಧಾರದ ಮೇಲೆ ಉಚಿತವಾಗಿ ಪ್ರಾಯಾಣಿಸಲು ನಿಗಧಿಪಡಿಸಿದ್ದ ದಿನಾಂಕವನ್ನು ಮುಂದುವರೆಸಿರುವುದಾಗಿ ಟ್ವಿಟರ್ ನಲ್ಲಿ ಮಾಹಿತಿ ನೀಡಿದೆ.
2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ತಾಂತ್ರಿಕ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಬಸ್ ಪಾಸ್ ಗಳನ್ನು ಡಿ.31ರವರೆಗೆ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಕ್ರಮಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಶೀದಿಯೊಂದಿಗೆ, 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ಸಂಬಂಧಪಟ್ಟ ಮಾರ್ಗದಲ್ಲಿ ಕರಾರಸಾ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಟ್ವೀಟರ್ ನಲ್ಲಿ ತಿಳಿಸಲಾಗಿದೆ.
key words : Free-bus-travel-students-Continued-decenbar.31