ಮೈಸೂರು,ಜ,22,2020(wwww.justkannada.in): ಫ್ರೀ ಕಾಶ್ಮೀರ ಪ್ಲೆಕಾರ್ಡ್ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧಾರ ಮಾಡಿದ್ದು ಅಸಂವಿಧಾನಿಕ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟೀಕಿಸಿದರು.
ಮೈಸೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘದ ನಿರ್ಧಾರ ಅಸಂವಿಧಾನಿಕವಾದದ್ದು. ಆ ರೀತಿ ನಿರ್ಧಾರ ತೆಗೆದುಕೊಳ್ಳಲು ವಕೀಲರ ಸಂಘಕ್ಕೆ ಅವಕಾಶವೇ ಇಲ್ಲ. ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ್ದು ದೇಶ ದ್ರೋಹದ ಕೆಲಸವಲ್ಲ. ಕಾಶ್ಮೀರದಲ್ಲಿ ಇಂದಿಗೂ ತುರ್ತುಸ್ಥಿತಿ ಇದೆ. ಅದರಿಂದ ಮುಕ್ತಗೊಳಸಬೇಕೆಂಬ ಭಾವನೆಯಿಂದ ನಳಿನಿ ಪ್ಲೇ ಕಾರ್ಡ್ ಪ್ರದರ್ಶಿಸಿದ್ದಾಳೆ. ಇದರ ವಿರುದ್ದ ಮೈಸೂರು ವಕೀಲರ ಸಂಘ ವಕಾಲತ್ತು ಹಾಕದೆ ನಿರ್ಣಯ ಕೈಗೊಂಡಿರೊದು ಸರಿಯಲ್ಲ. ಇದನ್ನ ಪ್ರಶ್ನೆ ಮಾಡಿದ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಮೇಲೆ ವಕೀಲರಿಂದ ಹಲ್ಲೆಗೆ ಯತ್ನ ನಡೆದಿದೆ. ಇಂತಹ ಗೂಂಡಾಗಿರಿಯನ್ನು ನಾನು ಖಂಡಿಸುತ್ತೇವೆ ಎಂದು ಕಿಡಿಕಾರಿದರು.
ಬರದಿಂದ ತತ್ತರಿಸಿರುವ ರೈತರಿಂದ ಬಲವಂತವಾಗಿ ಸಾಲ ವಸೂಲಿ ಮಾಡಬಾರದು…
ರಾಜ್ಯ ಸರ್ಕಾರದಿಂದ ಬಲವಂತವಾಗಿ ರೈತರ ಸಾಲ ವಸೂಲಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಬರದಿಂದ ತತ್ತರಿಸಿರುವ ರೈತರಿಂದ ಬಲವಂತವಾಗಿ ಯಾವುದೆ ಕಾರಣಕ್ಕೂ ಸಾಲ ವಸೂಲಿ ಮಾಡಬಾರದು. ರೈತರು ತಾವಾಗಿಯೇ ಸಾಲ ವಾಪಸ್ ಕೊಟ್ಟರೆ ತಗೆದುಕೊಳ್ಳಿ. ಆದರೆ ಸರ್ಕಾರ ರೈತರಿಂದ ಸಾಲವನ್ನ ಬಲವಂತವಾಗಿ ವಸೂಲಿ ಮಾಡಬಾರದು. ಒಂದು ವೇಳೆ ವಸೂಲಿ ಮಾಡಿದರೆ ಹೋರಾಟ ಮಾಡಬೇಕಾಗುತ್ತದೆ. ನಾನು ಸಿಎಂ ಆಗಿದ್ದಾಗಲೇ ಬರದ ಕಾರಣಕ್ಕಾಗಿಯೇ ರೈತರಿಂದ ಬಲವಂತ ಸಾಲ ವಸೂಲಿಬೇಡವೆಂದು ಹೇಳಿದ್ದೆ. ರಾಜ್ಯ ಸರ್ಕಾರದ ಈ ನಿಲುವನ್ನ ನಾನು ಖಂಡಿಸುತ್ತೇನೆ ಎಂದು ಸಿದ್ಧರಾಮಯ್ಯ ತಿಳಿಸಿದರು.
ಅವರಿಗೆ ಮೊದಲು ಉಳಿದುಕೊಳ್ಳಲು ಸ್ಥಳ ಕೊಟ್ಟವರು ಇವರೇ…ಈಗ ಅವರನ್ನು ಓಡಿಸುವವರು ಇವರೇ.
ಬಾಂಗ್ಲಾ ವಲಸಿಗರ ಶೆಡ್ ಗಳ ತೆರವು ವಿಚಾರ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಅವರಿಗೆ ಮೊದಲು ಉಳಿದುಕೊಳ್ಳಲು ಸ್ಥಳ ಕೊಟ್ಟವರು ಇವರೇ. ಈಗ ಅವರನ್ನು ಓಡಿಸುವವರು ಇವರೇ. ಇದು ಯಾವ ರೀತಿಯ ನಿಲುವು ಎಂದು ಪ್ರಶ್ನಿಸಿದರು. ಇದು ಅವರ ದ್ವಂಧ್ವ ನಿಲುವನ್ನು ತೋರಿಸುತ್ತದೆ. ಸಿಎಎ ಕಾಯ್ದೆಯಡಿ ಬಾಂಗ್ಲಾದಿಂದ ಬಂದವರಿಗೆ ಪೌರತ್ವ ಕೊಡುತ್ತೇವೆ ಎನ್ನುತ್ತಾರೆ. ಈಗ ಅವರನ್ನೇ ಓಡಿಸುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಟೀಕಿಸಿದರು.
ಮೈಸೂರು ಜಿಲ್ಲಾ ವಕೀಲರ ಸಂಘದ ಸದಸ್ಯತ್ವದಿಂದ ವಕೀಲ ಪಿ ಪಿ ಬಾಬುರಾಜ್ ಅಮಾನತು…
ಮೈಸೂರು ಜಿಲ್ಲಾ ವಕೀಲರ ಸಂಘದ ಸಂಘದ ನಿಯಮಗಳಿಗೆ ವಿರುದ್ದವಾಗಿ ನಡೆದುಕೊಂಡಿದ್ದ ಆರೋಪ ಹಾಗೂ ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶನ ಪ್ರಕರಣ ವಿಚಾರದಲ್ಲೂ ಸಂಘದ ವಿರುದ್ದ ವಕೀಲರನ್ನು ಎತ್ತಿಕಟ್ಟಿದ ಆರೋಪದ ಮೇಲೆ ವಕೀಲ ಪಿ.ಪಿ ಬಾಬುರಾಜ್ ಅವರನ್ನ ಅಮಾನತು ಮಾಡಲಾಗಿದೆ.
ಬಾಬುರಾಜ್ ಸಂಘದ ನಿಯಮಗಳಿಗೆ ವಿರುದ್ದವಾಗಿ ನಡೆದುಕೊಂಡಿದ್ದರು. ಮೈಸೂರಿನಲ್ಲಿ ವಕೀಲರ ಸಮಾವೇಶ ನಡೆಸಿದ್ದ ವೇಳೆ ವಕೀಲರಿಗೆ ಅವಮಾನ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮೈಸುರು ವಕೀಲರು ದೂರು ನೀಡಿದ್ದರು. ಸಂಘದ ವಿರುದ್ದ ಕೆಲಸ ಮಾಡಿದ ಹಿನ್ನೆಲೆಯಲ್ಲಿ ಬಾಬುರಾಜ್ ರನ್ನ ಮೈಸೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Key words: free kasmir- Nalini –Mysore- Lawyers Association- decision – -unconstitutional-Former CM- Siddaramaiah.