ಬೆಂಗಳೂರು,ಮಾ,2,2020(www.justkannada.in): ದೊರೆಸ್ವಾಮಿ ನಕಲಿ ಸ್ವಾತಂತ್ರಹೋರಾಟಗಾರ ಎಂದು ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಬಗ್ಗೆ ಕ್ಷಮೆ ಕೋರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ವಿಧಾನಮಂಡಲ ಬಜೆಟ್ ಅಧಿವೇಶನ ಪ್ರಾರಂಭವಾಗುವುದಕ್ಕೂ ಮೊದಲು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಾವುದೇ ಕಾರಣಕ್ಕೂ ನಾನು ಹೇಳಿಕೆಯನ್ನ ವಾಪಸ್ ಪಡೆಯುವುದಿಲ್ಲ. ಈ ವಿಚಾರದಲ್ಲಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಈ ಹೇಳಿಕೆಯನ್ನ ಆರ್ ಎಸ್ ಎಸ್ ನವರು ಹೇಳಿಸಿಲ್ಲ ಎಂದರು.
ಹಾಗೆಯೇ ಈ ಕುರಿತು ತಮ್ಮ ವಿರುದ್ದ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ಗೆ ಮಾಡಲು ಕೆಲಸ ಇಲ್ಲ. ಹೀಗಾಗಿ ನನ್ನ ವಿರುದ್ದ ಹೋರಾಟ ಮಾಡುತ್ತಿದ್ದಾರೆ ಎಂದು ತಿಳಿಸಿದರು.
Key words: freedom fighter- doreswamy- no question –apology-MLA -Basanagouda Patil Yatnal.