ಹುಬ್ಬಳ್ಳಿ,ಸೆಪ್ಟಂಬರ್,16,2021(www.justkannada.in): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆತ್ಮೀಯ ಸ್ನೇಹಿತ ರಾಜು ಪಾಟೀಲ್ ನಿಧನರಾಗಿದ್ದು, ಗೆಳೆಯನ ಅಗಲಿಕೆಗೆ ಕಂಬನಿ ಮಿಡಿದು ಸಿಎಂ ಬೊಮ್ಮಾಯಿ ಕಣ್ಣೀರು ಹಾಕಿದರು.
ನಿನ್ನೆ ರಾಜು ಪಾಟೀಲ್ ಅವರು ಅಕಾಲಿಕವಾಗಿ ನಿಧನರಾಗಿದ್ದು, ನಿನ್ನೆ ಗೆಳೆಯನ ಸಾವಿನ ಸುದ್ದಿ ಕೇಳಿ, ಮೌನಕ್ಕೆ ಶರಣಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜು ಪಾಟೀಲ್ ಅವರ ಸಾವಿಗೆ ಕಂಬನಿ ಮಿಡಿದರು.
ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಆತ್ಮೀಯ ಸ್ನೇಹಿತ ರಾಜು ಪಾಟೀಲ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಸ್ನೇಹಿತನ ಪಾರ್ಥಿವ ಶರೀರಕ್ಕೆ ನಮಿಸಿದರು. ಬಳಿಕ ಸ್ನೇಹಿತನ ಪಾರ್ಥಿವ ಶರೀರದ ಮುಂದೆ ಕಣ್ಣೀರು ಹಾಕಿದರು. ಇದೇ ವೇಳೆ ಮನೆಯ ಮುಂಭಾಗದಲ್ಲಿ ಸ್ನೇಹಿತರೊಂದಿಗೆ ಕುಳಿತು ಹಿಂದಿನ ನೆನಪುಗಳನ್ನು ಮೆಲಕು ಹಾಕಿದರು.
Key words: friend-dead-hubli-CM Basavaraja Bommai- tears