ರಾಜ್ಯೋತ್ಸವ ಪ್ರಶಸ್ತಿಗೆ  ಆಯ್ಕೆ ವೇಳೆ  ಪ್ರಾದೇಶಿಕ ಸಾಮಾಜಿಕ ನ್ಯಾಯ, ಅರ್ಹತೆ, ಪ್ರತಿಭೆಗೆ ಅವಕಾಶ ನೀಡುವಂತೆ ಸಿಎಂ ಸಿದ್ದರಾಮಯ್ಯ  ಸೂಚನೆ

ಬೆಂಗಳೂರು, ಅಕ್ಟೋಬರ್ 26,2023(www.justkannada.in):  ರಾಜ್ಯೋತ್ಸವ ಪ್ರಶಸ್ತಿಗೆ  ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ  ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಕನ್ನಡ  ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ  ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯ ಪಟ್ಟರು.

ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ  ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಅರ್ಜಿ ಕೊಡುವವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ENGLISH SUMMARY..

CM chairs high level meeting of Rajyotsava Award Selection Committee

Regional and Social Justice, merit and talent should be considered: *Chief Minister Siddaramaiah

Bengaluru, October 26:

Chief Minister Siddaramaiah suggested that Rajyotsava Award should be bestowed upon the most deserving. Regional justice must be followed. All castes, religions and genders should get representation while selecting the awardees.

He was speaking at the high-level meeting of the Kannada Rajyotsava Award Selection Committee held under his chairmanship here today.

The members of the selection committee opined that 10 awards should be given to organizations that have worked in favour of Kannada in the background of 50 years of renaming the state as Karnataka.

68 Rajyotsava awards are to be conferred this year and it was decided in the meeting to give away 10 awards to organizations on the occasion of Karnataka Sambhrama.

The Chief Minister said that since the number of applicants were very high for Rajyotsava awards, our government had previously decided to give as many awards as the number of years of Karnataka Ekikarana.

Key words: CM Siddaramaiah- regional -social justice- selecting – Rajyotsava award