ಬೆಂಗಳೂರು,ಫೆಬ್ರವರಿ,13,2024(www.justkannada.in): ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ಎಫ್ ಐಆರ್ ದಾಖಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದೀಗ ಸಿಬಿಐನಲ್ಲಿ ಇದ್ದ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ.
ಸಿಬಿಐಯಲ್ಲಿದ್ದ ಪ್ರಕರಣವನ್ನು ಮರು ತನಿಖೆಗೆ ಲೋಕಾಯುಕ್ತ ಎಫ್ಐಆರ್ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಪತ್ರ ಬರೆದಿದೆ. ಆದ್ರೆ, ಸಿಬಿಐ ಈವರೆಗೂ ಲೋಕಾಯುಕ್ತಕ್ಕೆ ಸಂಬಂಧಿಸಿದ ದಾಖಲೆ ಒದಗಿಸಿಲ್ಲ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಡಿಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ವಹಿಸಿರುವ ಆದೇಶವನ್ನು ವಾಪಸ್ ಪಡೆದುಕೊಂಡಿತ್ತು. ಡಿಕೆ ಶಿವಕುಮಾರ್ ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಕಾನೂನಾತ್ಮಕವಾಗಿ ಇಲ್ಲ. ಸ್ಪೀಕರ್ ಅನುಮತಿ, ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯ ಪಡೆಯದೇ ತನಿಖೆಗೆ ನೀಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿತ್ತು. ‘
ಇನ್ನು ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯ ಆದೇಶವನ್ನು ಸರ್ಕಾರ ವಾಪಸ್ ಪಡೆದುಕೊಂಡಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೋರ್ಟ್ ಮೊರೆ ಹೋಗಿದ್ದು, ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 29ಕ್ಕೆ ಮುಂದೂಡಿದೆ.
Key words: DCM -DK Shivakumar- FIR – Lokayukta.