ಬೆಂಗಳೂರು,ಜನವರಿ,5.2024(www.justkannada.in): ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ದದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನ ಹೈಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್ ಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದ್ದು, ಡಿಕೆ ಶಿವಕುಮಾರ್ ಪ್ರಕರಣ ಲೋಕಾಯುಕ್ತ ತನಿಖೆಗೆ ವಹಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಇಂದು ಸಿಬಿಐ ಹೈಕೋರ್ಟ್ಗೆ ಮನವಿ ಸಲ್ಲಿಸಲಾಗಿತ್ತು.
ಹಾಗೆಯೇ ಡಿಕೆ ಶಿವಕುಮಾರ್ ವಿರುದ್ಧ CBI ತನಿಖೆಗೆ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ಏಕ ಪೀಠ ವಿಚಾರಣೆಯನ್ನ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ಇನ್ನು ಈ ವೇಳೆ ಹೈಕೋರ್ಟ್ ನ್ಯಾಯಪೀಠದ ಮುಂದೆ ಕಾನೂನು ದುರುಪಯೋಗವನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ ಎಂಬುದಾಗಿ ವಾದವನ್ನು ಮಂಡಿಸಲಾಯಿತು. ಈ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದೊಂದು ಗಂಭೀರ ಪ್ರಕರಣವಾಗಿದ್ದು, ಡಿಕೆ ಶಿವುಕಮಾರ್ ಪ್ರಕರಣವನ್ನು ವಿಸ್ತೃತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಲು ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಮೂಲಕ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿಗೊಳಿಸಿದೆ.
Key words: DK Shivakumar- Illegal – Property-Case- Transferred – High Court -Extended Bench.