ನವದೆಹಲಿ, ನವೆಂಬರ್ 23,2023(www.justkannada.in): ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಸೂಚನೆ ನೀಡಿದೆ.
ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿರುವ CWRC ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ತಮಿಳುನಾಡಿಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.
ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ ಅವಧಿಯಲ್ಲಿ ಹರಿಸಬೇಕಿದ್ದ 6 ಟಿಎಂಸಿ ನೀರು ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಬೇಡಿಕೆ ಇಟ್ಟಿತ್ತು. ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ಹಾಗೂ ಡಿಸೆಂಬರ್ ನ ಅವಧಿಯಲ್ಲಿ ಹರಿಸಬೇಕಿರುವ 6 ಟಿಎಂಸಿ ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸಬೇಕೆಂದು ಪಟ್ಟು ಹಿಡಿದಿತ್ತು.
ತಮಿಳುನಾಡಿನ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ , ಕರ್ನಾಟಕ ರಾಜ್ಯದಲ್ಲಿ ಈಗ ಬರ ಪರಿಸ್ಥಿತಿ ಎದುರಾಗಿದೆ. ತಮಿಳುನಾಡು 17ಟಿಎಂಸಿ ನೀರು ಕೇಳುತ್ತಿರುವುದಕ್ಕೆ ಅರ್ಥವೇ ಇಲ್ಲ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲ. ಕುಡಿಯುವ ಬಳಕೆಗೂ ನೀರು ಸಂಗ್ರಹವಿಲ್ಲ. ಕರ್ನಾಟಕದಲ್ಲಿ ಮುಂದೆ ಮಳೆಯಾಗುವ ಸಾಧ್ಯತೆ ಸಹ ಕಡಿಮೆ. ತಮಿಳುನಾಡು ರಾಜ್ಯದಲ್ಲಿ ಈಗ ಹೆಚ್ಚು ಮಳೆಯಾಗುತ್ತಿದೆ. ಹಿಂಗಾರು ಮಾರುತಗಳು ಪ್ರಬಲವಾಗಿವೆ, ಮಳೆ ಹೆಚ್ಚು ಸುರಿಯುತ್ತಿದೆ. ತಮಿಳುನಾಡಿಗೆ ನೀರು ಬಿಟ್ಟರೆ ವಾಪಸ್ ತೆಗೆದುಕೊಳ್ಳಲು ಸಾಧ್ಯವೆ? ಹೀಗಾಗಿ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಕರ್ನಾಟಕದ ಅಧಿಕಾರಿಗಳು ವಾದ ಮಂಡಿಸಿತ್ತು.
Key words: Karnataka – Cauvery -issue –release- water -Tamil Nadu.