ಮೈಸೂರು, ಅಕ್ಟೋಬರ್,24,2023(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಅರಮನೆ ಆವರಣದಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ.
ಐತಿಹಾಸಿಕ ಜಂಬೂಸವಾರಿ ವೀಕ್ಷಿಸಲು ಲಕ್ಷಾಂತರ ಜನ ಕಾಯುತ್ತಿದ್ದು, ಸಾಂಸ್ಕೃತಿಕ ನಗರಿಯತ್ತ ಧಾವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದ್ದು, 11 ಐಪಿಎಸ್ ಅಧಿಕಾರಿಗಳು ಸೇರಿ 4,000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಅರಮನೆ ಮೈದಾನಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 1.46ರಿಂದ 2.08ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಪೂಜೆ ನಡೆಯಲಿದೆ. ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿಯಲ್ಲಿನ ತಾಯಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ನಂತರ ಜಂಬೂಸವಾರಿ ಆರಂಭವಾಗುತ್ತದೆ.
Key words: Mysore Dasara-Preparations-jambu savari- palace -Tight -police –security