ನವದೆಹಲಿ,ಫೆಬ್ರವರಿ,1,2024(www.justkannada.in): 2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಮಂಡನೆಯನ್ನ ಕೇಂದ್ರಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರಂಭಿಸಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 10 ವರ್ಷಗಳಲ್ಲಿ ದೇಶದ ಆರ್ಥಿಕತೆ ಬದಲಾವಣೆಯಾಗಿದೆ. ಕೇಂದ್ರ ಸರ್ಕಾರ ಜನಪರ ಕಾರ್ಯಕ್ರಮ ಜಾರಿ ಮಾಡಿದೆ. ದೇಶದ ಆರ್ಥಿಕತೆಗೆ ಹೊಸ ಚೈತನ್ಯ ಸಿಕ್ಕಿದೆ . ಪ್ರಧಾನಿ ಮೋದಿ ನೇತೃತ್ವದಲ್ಲಿ ಆರ್ಥಿಕತೆ ಸಾಧನೆ ಕಂಡಿದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ದೇಶದ 80 ಕೋಟಿ ಜನರಿಗೆ ಉಚಿತ ರೇಷನ್ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
Key words: Nirmala Sitharaman -started -presenting – Union Budget.