ಬೆಂಗಳೂರು, ನವೆಂಬರ್ 07, 2023 (www.justkannada.in): ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಇನ್ನೂ ಎರಡು ದಿನ ವ್ಯಾಪಕ ಮಳೆ ಸುರಿಯುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಗುರುವಾರದವರೆಗೆ ಇಡೀ ರಾಜ್ಯದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇಂದು ಕೂಡ ಬೆಂಗಳೂರು ನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋದ ಕವಿದ ವಾತಾವರಣ ಇದ್ದು ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.