ಇಂಧನ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಆಗ್ರಹ: ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ….

ಬೆಂಗಳೂರು,ಜೂ,19,2020(www.justkannada.in): ದೇಶದಲ್ಲಿ ದಿನೇ ದಿನೇ ಇಂಧನ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ, ಇಂಧನ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ  ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ದಿನೇ ದಿನೇ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಮಾತ್ರ ತೈಲ ಬೆಲೆ ಏರಿಕೆಯಾಗುತ್ತಿದೆ.fuel-price-hike-former-cm-siddaramaiah-letter-pm-modi

fuel-price-hike-former-cm-siddaramaiah-letter-pm-modi

ಕಳೆದ 12 ದಿನಗಳಿಂದ ನಿರಂತರವಾಗಿ ಇಂಧನ ಬೆಲೆ ಏರಿಕೆಯಾಗುತ್ತಿದ್ದು, 12 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ರೇಟ್ 7 ರೂಪಾಯಿಯಷ್ಟು ಹೆಚ್ಚಳವಾಗಿದೆ. ಹೀಗಾಗಿ ಇಂಧನ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಸಿದ್ಧರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Key words: fuel –price- hike-Former CM –Siddaramaiah- letter – PM Modi