ಬೆಂಗಳೂರು,ಏಪ್ರಿಲ್,14,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗುತ್ತಿದ್ದು ಈ ಮಧ್ಯೆ ಲಾಕ್ ಡೌನ್ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ಇದಕ್ಕೆ ಈಗಾಗಲೇ ಸಿಎಂ ಬಿಎಸ್ ವೈ ಸ್ಪಷ್ಟನೆ ನೀಡಿದ್ದು ಯಾವುದೇ ಲಾಕ್ ಡೌನ್ ಪ್ರಸ್ತಾಪವಿಲ್ಲ ಎಂದಿದ್ದಾರೆ.
ಇನ್ನು ಕೊರೋನಾ ನಿಯಂತ್ರಣ ಲಾಕ್ ಡೌನ್ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೊರತುಪಡಿಸಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಸಿಎಂ ಬಿಎಸ್ ವೈ ಪ್ರವಾಸದಿಂದ ಬಂದ ಬಳಿಕ ಸರ್ವಪಕ್ಷ ಸಭೆ ನಡೆಸಲಿದ್ದಾರೆ. ಇಲ್ಲಿ ಎಲ್ಲರ ಸಲಹೆ ಸೂಚನೆ ಪಡೆಯಲಿದ್ದಾರೆ. ರಾಜ್ಯದಲ್ಲಿ ಸೋಂಕು, ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣ ಕಳೆದ ವರ್ಷದಷ್ಟೇ ಆಗುತ್ತಿದೆ. ಈ ನಿಟ್ಟಿನಲ್ಲಿ ಲಾಕ್ ಡೌನ್ ಹೊರತುಪಡಿಸಿ ಬಿಗಿಯಾದ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.
Key words: Further- tightening –action-corona control-Minister- Sudhakar.