ಬೆಂಗಳೂರು,ಆಗಸ್ಟ್,29,2022(www.justkannada.in): ಆಗಸ್ಟ್ 31 ರಂದು ಗಣೇಶ ಚತುರ್ಥಿ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಆಗಸ್ಟ್ 31 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಮಾಂಸ ನಿಷೇಧಿಸಿ ಸುತ್ತೋಲೆ ಹೊರಡಿಸಿರುವ ಬಿಬಿಎಂಪಿ , ಮಾರ್ಚ್ 31 ರ ಬುಧವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳೀಸಿದೆ.
ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಆಯೋಜಕರು ಗಣೇಶ ಪ್ರತಿಷ್ಟಾಪನೆಗೆ ಬಿಬಿಎಂಪಿಯ ಏಕಗವಾಕ್ಷಿ ಅನುಮತಿಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ತಿಳಿಸಿದೆ.
Key words: Ganesha Chaturthi – August 31- Ban -sale -meat – Bengaluru.