ಬೆಂಗಳೂರು,ಆಗಸ್ಟ್,1,2023(www.justkannada.in): ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತ ವಿಚಾರ ಬಹಳ ಸದ್ದು ಮಾಡುತ್ತಿದ್ದು ಈ ಕುರಿತು ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪಿಸಿದ್ದ ಬಿಜೆಪಿ ನಾಯಕರಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ಧರಾಮಯ್ಯ, ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.
ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಮಾತ್ರ ಹಿಂದೂ ವಿರೋಧಿಯೋ? ಎಂದು ಕುಟುಕಿದ್ದಾರೆ.
ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.
Key words: Ghee -supply – Tirupati -stopped – BJP- government- CM -Siddaramaiah