ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ನೀಡುವ ಗುರಿ-ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜೂನ್ 21,2021(www.justkannada.in): ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.jk

ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಲಸಿಕಾ ಮಹಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ನಂತರ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಅಂತಾರಾಷ್ಟ್ರೀಯ ಯೋಗ ದಿನದಂದೇ ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್ ಲಸಿಕೆ ಅಭಿಯಾನ ನಡೆಸಲು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಂದೇ ದಿನ ಸುಮಾರು 7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಇದೆ. 18-44 ವರ್ಷದವರಿಗೆ ಲಸಿಕೆ ಹಾಗೂ ಎರಡನೇ ಡೋಸ್ ಪಡೆಯುವವರಿಗೂ ಲಸಿಕೆ ನೀಡಲಾಗುತ್ತಿದೆ. ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಈ ವರ್ಷ ‘ಬಿ ವಿತ್ ಯೋಗ’, ‘ಯೋಗ ಫಾರ್ ವೆಲ್ ನೆಸ್’ ಎಂಬ ಘೋಷವಾಕ್ಯವಿದೆ. ದೊಡ್ಡ ಸಮಾರಂಭ ಇಟ್ಟುಕೊಳ್ಳದೆ ಕೋವಿಡ್ ಮಾರ್ಗಸೂಚಿ ಪಾಲಿಸಿ ಯೋಗ ದಿನ ಆಚರಿಸಲಾಗುತ್ತಿದೆ. ಯೋಗ ಕೇವಲ ದೈಹಿಕ ಮಾತ್ರವಲ್ಲದೆ, ಮಾನಸಿಕ, ಸಾಮಾಜಿಕ ಆರೋಗ್ಯಕ್ಕೆ ಅಗತ್ಯ. ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಇದನ್ನು ಪ್ರಸ್ತಾಪ ಮಾಡಿದ್ದು, ನಂತರ ಇಡೀ ಜಗತ್ತು ಯೋಗ ದಿನ ಆಚರಿಸುತ್ತಿದೆ ಎಂದರು.

ನಮ್ಮ ದೇಹ ರಥದಂತೆ ಎಂದು ಭಗವದ್ಗೀತೆಯಲ್ಲಿ ಹೇಳಲಾಗಿದೆ. ರಥದ ಕುದುರೆ ಇಂದ್ರಿಯ, ಸಾರಥಿ ಮನಸ್ಸು ಎನ್ನಲಾಗಿದೆ. ಮನಸ್ಸು ಸರಿ ಇದ್ದರೆ ಕುದುರೆಗಳು ಸರಿಯಾಗಿ ಓಡುತ್ತವೆ. ಇದೆಲ್ಲ ಸಾಧ್ಯವಾಗಲು ಯೋಗ ಮಾಡಬೇಕು. ಶ್ವಾಸಕೋಶಕ್ಕೆ ಉತ್ತಮ ವ್ಯಾಯಾಮವಾದ ಪ್ರಾಣಾಯಾಮ, ಧ್ಯಾನ ಮಾಡಬೇಕು. ಇದು ಕೇವಲ ಚಿಕಿತ್ಸೆ ಅಲ್ಲದೆ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ವಿಧಾನವಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

1.86 ಕೋಟಿ ಲಸಿಕೆ

15 ಲಕ್ಷಕ್ಕೂ ಅಧಿಕ ಕೋವಿಶೀಲ್ಡ್ ಹಾಗೂ 6-7 ಲಕ್ಷ ಕೋವ್ಯಾಕ್ಸಿನ್ ಲಸಿಕೆ ರಾಜ್ಯದಲ್ಲಿ ಸಂಗ್ರಹವಿದೆ. 1.86 ಕೋಟಿ ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ 13 ಸಾವಿರ ಲಸಿಕಾ ಕೇಂದ್ರಗಳಿವೆ. ಒಂದು ಕೇಂದ್ರದಲ್ಲಿ 70-80 ಜನರಿಗೆ ಲಸಿಕೆ ನೀಡಿದರೂ ನಾವು ಗುರಿ ಮುಟ್ಟಲು ಸಾಧ್ಯವಿದೆ. ಇದಕ್ಕೆ ಜನರ ಸಂಪೂರ್ಣ ಸಹಕಾರ ಬೇಕಿದೆ. ಸ್ಪುಟ್ನಿಕ್ ಲಸಿಕೆ ನೀಡಲು ಅನುಮತಿ ಇದ್ದು, ಈ ಲಸಿಕೆಯ ಲಭ್ಯತೆ ಬಗ್ಗೆ ನೋಡಬೇಕಿದೆ ಎಂದರು.

ಕೋವಿಡ್ ಲಸಿಕೆ ಬಗ್ಗೆ ರಾಜ್ಯದ ಜನರಿಗೆ ಹೆಚ್ಚು ಜಾಗೃತಿ ಇದೆ. ಆರಂಭಿಕ ಹಂತದಲ್ಲಿ ಕೆಲ ಪಕ್ಷಗಳು ಲಸಿಕೆ ಬಗ್ಗೆ ಜನರ ಮನಸ್ಸಿನಲ್ಲಿ ಅಂಜಿಕೆ ಉಂಟುಮಾಡಿದ್ದವು. ಆದರೆ ಕ್ರಮೇಣ ಜನರಿಗೆ ನಂಬಿಕೆ ಬಂದಿದೆ. ಲಸಿಕೆಯೊಂದೇ ಕೊರೊನಾ ನಿವಾರಣೆಗೆ ಸೂಕ್ತ ಪರಿಹಾರ ಎಂಬುದು ಅರಿವಾಗಿದೆ ಎಂದರು.

ಕೋವಿಡ್ ಸಂಬಂಧಿ ಅಂಕಿ ಅಂಶ ನೀಡುವಲ್ಲಿ ರಾಜ್ಯ ಮಾದರಿಯಾಗಿದೆ ಎಂದು ಕೇಂದ್ರ ಸರ್ಕಾರವೇ ಶ್ಲಾಘಿಸಿದೆ. ನಮ್ಮ ಸರ್ಕಾರ ಯಾವುದೇ ಮಾಹಿತಿ ಮುಚ್ಚಿಡುತ್ತಿಲ್ಲ. ಕಪ್ಪು ಶಿಲೀಂಧ್ರಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಬಿಡುಗಡೆಗೆ ಹೊಸ ಮಾರ್ಗಸೂಚಿಯನ್ನೂ ತರಲಾಗಿದೆ ಎಂದು ಸಚಿವ ಸುಧಾಕರ್ ನುಡಿದರು.

ENGLISH SUMMARY…

Target to vaccinate every eligible citizen by end of the year:Health and Medical Education Minister Dr.K.Sudhakar

1.86 crore doses administered so far

Bengaluru, June 21, Monday

Karnataka aims to vaccinate every eligible citizen by the end of December and make the state free from Covid-19, said Health and Medical Education Minister Dr.K.Sudhakar.

Chief Minister B.S.Yediyurappa flagged off the Laiksa Maha Abhiyana at Atal Bihari Vajpayee Medical College, organized on the occasion of International Yoga Day.

Speaking to media, Dr.Sudhakar said that PM Narendra Modi has suggested to organise accelerated vaccination drive to mark the Yoga Day. Today we have set a target to inoculate about 7 lakh people in a single day. Our aim to vaccinate every eligible citizen by the end of December and make the state free from Covid-19,

The theme of this year’s Yoga Day is ‘Be with Yoga, Yoga for Wellness’. In the wake of pandemic, this year too we need to celebrate yoga day at our homes. Yoga is necessary not just for individual’s physical and mental health but also for societal health. Yoga is India’s gift to the world and it is a matter of pride that the whole world is celebrating Yoga Day every year on 21st June, ever since PM Modi proposed this at UN General Assembly in September 2014, he added.

Gita says that our body is akin to a chariot whose charioteer is our mind and our senses are the horses of the chariot. If only our mind is sound and balanced the senses (horses) will move in right direction. Yoga helps in maintaining a sound and balanced mind which is in sync with our body. The benefits of pranayama for the health of lungs is immense. Yoga also increases our immunity power, he said.

1.86 crore doses administered

We have a stock of about 15 lakh doses of covishield and 6-7 lakh doses of covaxin in the state. More than 1.86 crore doses have been administered so far in 13,000 vaccination centres across the state. Even if we achieve 70-80 doses per centre we will meet our target. Active participation from citizens is crucial for the success of vaccination drive, he said.

The awareness about importance of vaccine has increased now. Initially people were hesitant but gradually the hesitancy has come down. Peope have now realised that vaccine is the best way to protect ourselves from the virus, minister said.

State govt is not hiding any data. Central govt itself has praised that Karnataka is a model in publishing data with transparency, he added.

Key words: goal -everyone – Corona vaccine – end – December-Minister – Dr. K. Sudhakar.