ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ತೀರ್ಮಾನಿಸಿದೆ.
ಅತಿ ಹೆಚ್ಚು ಕೊರೊನಾ ಸೋಂಕು ವರದಿಯಾಗುತ್ತಿರುವ ಕೇರಳ ಗಡಿಯನ್ನು ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ನಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಆದರೂ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.
ಜಿಲ್ಲೆಯಲ್ಲಿ ರಾಜ್ಯದ ಪ್ರಮುಖ ದೇವಸ್ಥಾನಗಳೆಂದು ಗುರುತಿಸಲ್ಪಟ್ಟಿರುವ ಹಲವು ಧಾರ್ಮಿಕ ಕ್ಷೇತ್ರಗಳಿವೆ. ಹೀಗಾಗಿ ಹೊರ ರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭೇಟಿ ನೀಡುವ ಹಿನ್ನಲೆಯಲ್ಲಿ ಪ್ರಮುಖ ಪುಣ್ಯಕ್ಷೇತ್ರಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹೊಸ ಕೊರೊನಾ ಮಾರ್ಗಸೂಚಿಯನ್ನು ಹೊರಡಿಸಿದೆ.
ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನಕ್ಕೆ ಅನ್ವಯಿಸುವಂತೆ ಈ ಮಾರ್ಗಸೂಚಿಯನ್ನು ಹೊರಡಿಲಾಗಿದೆ. ಈ ಮೂರೂ ದೇವಸ್ಥಾನಗಳಲ್ಲಿ ಭಕ್ತಾಧಿಗಳಿಗೆ ಬೆಳಿಗ್ಗೆ 7 ರಿಂದ ರಾತ್ರಿ 7ರ ತನಕ ದೇವರ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳು ದೇವರ ದರ್ಶನ, ತೀರ್ಥ, ಪ್ರಸಾದ, ಅನ್ನಸಂತರ್ಪಣೆಯಲ್ಲಿ ಪಾಲ್ಗೊಳ್ಳಬಹುದು.
key words: going to Dharmasthala Kukke Subramanya …? Keep an eye out for new guidelines …