ಬೆಳಗಾವಿ,ಏಪ್ರಿಲ್,25,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಈ ಮಧ್ಯೆ ಗೋಕಾಕ್ ನಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದು, ಈ ಮೂಲಕ ಜೆಡಿಎಸ್ ನಾಯಕರಿಗೆ ಶಾಕ್ ನೀಡಿದ್ದಾರೆ.
ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದನ್ ಗಿಡ್ಡನವರ್ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್ ಜೊತೆಗೆ ಕೈಜೋಡಿಸಿದ್ದಾರೆ. ಗೋಕಾಕ್ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಸೋಲಿಸಲು ಈ ಮೂಲಕ ಮುಂದಾಗಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಪಕ್ಷದ ನಾಯಕರಿಗೆ ಹೇಳದೆ ನಾಮಪತ್ರ ವಾಪಸ್ ಪಡೆದಿದ್ದಾರೆಂಬ ಟೀಕೆ ವ್ಯಕ್ತವಾಗಿದೆ.
ನಿನ್ನೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಕೊನೆಯ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದಿರುವ ಚಂದನ್ ಗಿಡ್ಡನವರ್, ಅವರು ಕಾಂಗ್ರೆಸ್ ಅಭ್ಯರ್ಥಿ ಡಾ.ಮಹಾಂತೇಶ ಕಡಾಡಿಗೆ ಬೆಂಬಲ ಘೋಷಿಸಿದ್ದಾರೆ. ನಾಮಪತ್ರ ವಾಪಸ್ ಪಡೆದ ಹಿನ್ನೆಲೆ ಚಂದನ್ ಗಿಡ್ಡನವರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಜೆಡಿಎಸ್ ನಿರ್ಧರಿಸಿದೆ.
Key words: Gokak Constituency- JDS –candidate-nomination – returned