ಬೆಂಗಳೂರು,ಮಾರ್ಚ್,19,2025 (www.justkannada.in): ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ತರುಣ್ ರಾಜ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಬೆಂಗಳೂರು ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ನಟಿ ರನ್ಯಾ ರಾವ್ ಸ್ನೇಹಿತ ತರುಣ್ ರಾಜು ವಿರುದ್ಧವೂ ಡಿಆರ್ ಐ ಅಧಿಕಾರಿಗಳು ಪ್ರಕರಣ ದಾಖಲಿಸಿ ಬಂಧಿಸಿದ್ದು ತರುಣ್ ರಾಜ್ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ತರುಣ್ ರಾಜ್ ಜಾಮೀನು ಕೋರಿ ಅವರು ಆರ್ಥಿಕ ಅಪರಾಧಗಳ ನ್ಯಾಯಾಲಯ ಮೊರೆ ಹೋಗಿದ್ದರು.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವನಾಥ ಗೌಡರ್, ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ತರುಣ್ ರಾಜ್ ಗೆ ಜೈಲೇ ಗತಿಯಾಗಿದೆ. ನಟಿ ರನ್ಯಾರಾವ್ ಜಾಮೀನು ಅರ್ಜಿಯನ್ನ ವಜಾಗೊಳಿಸಲಾಗಿತ್ತು.
Key words: Gold Smuggling Case,Tarun raj Bail application, dismissed