ಬೆಂಗಳೂರು,ಜುಲೈ,5,2023(www.justkannada.in): ವಾಹನ ಸವಾರರಿಗೆ ಮತ್ತೆ ಸಿಹಿಸುದ್ದಿ ಸಿಕ್ಕಿದ್ದು, ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಕಟ್ಟಲು ಈ ಹಿಂದೆ ಸರ್ಕಾರ ಶೇ 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿತ್ತು. ಇದೀಗ ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2023ರ ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಶೇ.50 ರಿಯಾಯತಿ ಇರಲಿದೆ. ಸೆಪ್ಟೆಂಬರ್ 9ರ ವರೆಗೆ ರಿಯಾಯಿತಿ ದರದಲ್ಲಿ ಡಂಡ ಪಾವತಿಸಲು ಅವಕಾಶವಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಘೋಷಣೆಯಾಗಿದ್ದು, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು.
Key words: Good news – 50% discount – paying -traffic fines