ಬೆಂಗಳೂರು,ಜು. 21,2020(www.justkannada.in): ರಾಜ್ಯದಲ್ಲಿ ಅಬ್ಬರಿಸುತ್ತಿರುವ ಕೊರೋನಾ ಮಹಾಮಾರಿ ತಡೆಗಟ್ಟಲು ಕೊರೋನಾ ವಾರಿಯರ್ಗಳಾಗಿ ಹಗಲು ರಾತ್ರಿ ದುಡಿಯುತ್ತಿರುವ ಆಯುಷ್ ವೈದ್ಯರು, ನರ್ಸ್ ಗಳ ವೇತನ ಹೆಚ್ಚಳಕ್ಕೆ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಆಯುಷ್ ವೈದ್ಯರ ತಿಂಗಳ ಸಂಬಳವನ್ನು 25 ಸಾವಿರದಿಂದ 48,000ಕ್ಕೆ ಏರಿಕೆ ಮಾಡಲಾಗಿದೆ. ಹಾಗೆಯೇ ನರ್ಸ್ ಗಳ ವೇತನವನ್ನ 15 ಸಾವಿರ ರೂ. ನಿಂದ 30 ಸಾವಿರಕ್ಕೆ ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ಆರು ತಿಂಗಳವರೆಗೆ ಮಾತ್ರ ಈ ವೇತನ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ನಾನ್ ಕೋವಿಡ್ ರೋಗಿಗಳಿಗೂ ಚಿಕಿತ್ಸೆ ಕೊಡಿಸಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಹೆಚ್ಚಿನ ದರ ಕೇಳುವಂತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
Key words: Good news – Ayush- doctor-govrnament- Decision –increase- wages.