ಬೆಂಗಳೂರು,ಮಾರ್ಚ್,4,2022(www.justkannada.in): ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ರೈತರಿಗೆ ಗುಡ್ ನ್ಯೂಸ್ ನೀಡಿದ್ದು ರೈತ ಶಕ್ತಿ ಹೊಸ ಯೋಜನೆ ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಾ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಅಭಿವೃದ್ಧಿಗೆ ತ್ರಿವಳಿ ಸೂತ್ರ. ಶಿಕ್ಷಣ, ಉದ್ಯೋಗ ಸಬಲೀಕರಣ ಸೂತ್ರ ಅನುಸರಿಸಲಾಗುತ್ತಿದೆ. ಸಮಗ್ರ ಆರ್ಥಿಕ ಮತ್ತು ಸಮಗ್ರ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ.
ರೈತರ ಆದಾಯ ದ್ವಿಗುಣಗೊಳಿಸಲು ಶ್ರಮಿಸುತ್ತಿದ್ದೇವೆ. ಯಂತ್ರೋಪಕರಣ ಖರೀದಿಗೆ ರೈತ ಶಕ್ತಿ ಯೋಜನೆ ಘೋಷಿಸಿಸುತ್ತಿದ್ದೇವೆ ಎಂದರು.
ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಸ್ಥಾಪಿಸಲು 50 ಕೋಟಿ. ರೈತರ ಆದಾಯ ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪನೆ. ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ. 1 ಸಾವಿರ ಎಕರೆ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಸಾರಜನಕ ಸ್ಥಿರೀಕರಣ. 2 ಲಕ್ಷ ಹೆಕ್ಟೇರ್ ಗಳಲ್ಲಿ ಸಾವಯವ ಕೃಷಿ ಆರಂಭ. ಬಳ್ಳಾರಿಯ ಹಗರಿಬೊಮ್ಮನಹಳ್ಳಿಯಲ್ಲಿ ಕೃಷಿ ಕಾಲೇಜು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದರು.
Key words: Good News – Farmers-budget