ಬೆಂಗಳೂರು, ಏಪ್ರಿಲ್ 24, 2020 (www.justkannada.in): ರಾಜ್ಯ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವುದಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಂತಿಮ ಕ್ಷಣದಲ್ಲಿ ಅಸಮ್ಮತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸಂಪನ್ಮೂಲ ಕ್ರೂಢಿಕರಣಕ್ಕಾಗಿ ಕೇರಳ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ಸಂಬಳವನ್ನು 6 ಕಂತುಗಳಲ್ಲಿ ಕಟ್ ಮಾಡುವ ಪ್ರಸ್ತಾವನೆಯೂ ಇತ್ತು.
ನಿನ್ನೆ ಸಿಎಂ ನೇತೃತ್ವದಲ್ಲಿ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಈ ಎಲ್ಲಾ ವಿಚಾರಗಳು ಚರ್ಚೆಯಾಗಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಸರ್ಕಾರಿ ನೌಕರರ ವೇತನ ಕಡಿತ ಮಾಡುವುದು ಬೇಡ ಎಂದಿದ್ದಾರೆ ಎನ್ನಲಾಗಿದೆ.
ಇನ್ನು ಕೇಂದ್ರ ಸರ್ಕಾರಿ ನೌಕರರ ಡಿಎ, ಡಿಆರ್ ಹೆಚ್ಚಳವನ್ನು ರದ್ದುಗೊಳಿಸಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಭತ್ಯೆಗಳನ್ನು ಮೂರು ತಿಂಗಳು ಹೊರಹಾಕಲು ಸರ್ಕಾರ ಗಂಭೀರವಾಗಿ ಆಲೋಚಿಸಿತ್ತು.