ಬೆಂಗಳೂರು,ಡಿಸೆಂಬರ್,11,2021(www.justkannada.in): ರಾಜ್ಯದ ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಉಚಿತ್ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ.
ಕೋವಿಡ್ 1 ಮತ್ತು 2ನೇ ಅಲೆಯಲ್ಲಿ ಕಾರ್ಮಿಕರಿಗೆ ಸಹಾಯ ಧನ, ಆಹಾರ ಕಿಟ್, ಲಸಿಕೆ ನೀಡಿದ್ದ ಕಾರ್ಮಿಕ ಇಲಾಖೆ ಇದೀಗ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆಗೆ ಮುಂದಾಗಿದೆ. ಬೆಂಗಳೂರು ಮಹಾನಗರದಲ್ಲಿ ಈಗಾಗಲೇ ಈ ಉಚಿತ ಸೇವೆಯನ್ನು ಜಾರಿ ಮಾಡಿರುವ ಕಾರ್ಮಿಕ ಇಲಾಖೆ ಈ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಿದೆ.
ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಇಂದು ಉಚಿತ ಬಸ್ ಪಾಸ್ ವ್ಯವಸ್ಥೆಗೆ ಚಾಲನೆ ನೀಡಿದರು. ಈ ಮೂಲಕ ಕೆಲಸದ ಸ್ಥಳಕ್ಕೆ ತೆರಳುವ ಕಟ್ಟಡ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ದಿನ ನಿತ್ಯ ಕೂಲಿಗಾಗಿ ತೆರಳುವ ಕಟ್ಟಡ ಕಾರ್ಮಿಕರಿಗೆ ಈ ಯೋಜನೆ ಲಾಭಕಾರಿಯಾಗಿದ್ದು, ಪ್ರತಿ ನಿತ್ಯ ಅವರು ಕೆಲಸ ನಿರ್ವಹಣೆಗೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳಲು ಕನಿಷ್ಠ 150 ರಿಂದ 200 ರೂ. ವ್ಯಯಿಸಬೇಕಾದ ಪರಿಸ್ಥಿತಿ ಇದೆ, ಇದರಿಂದ ಅವರು ಪಡೆಯುವ ಕೂಲಿ ಮೊತ್ತದ ಬಹುಭಾಗವನ್ನು ಸಾರಿಗೆಗೆ ವ್ಯಯಿಸುತ್ತಿದ್ದರು. ಇದನ್ನು ಮನಗಂಡ ಸಚಿವ ಶಿವರಾಂ ಹೆಬ್ಬಾರ್, ಕಟ್ಟಡ ಕಾರ್ಮಿಕರ ಅನುಕೂಲಕ್ಕಾಗಿ ಉಚಿತ ಸಾರಿಗೆ ವ್ಯವಸ್ಥೆಯ ಯೋಜನೆಗೆ ಚಾಲನೆ ನೀಡಿದರು.
Key words: Good news- government – state-building workers