ನವದೆಹಲಿ,ಜುಲೈ,29,2021(www.justkannada.in): ಓಬಿಸಿ ಸಮುದಾಯದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ವೈದ್ಯಕೀಯ ಶಿಕ್ಷಣ ಪಡೆಯುವುದಾದರೆ ಅವರಿಗೆ ಶೇ. 27ರಷ್ಟು ಮೀಸಲಾತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಹಾಗೆಯೇ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹಾಗೇ, ಆಲ್ ಇಂಡಿಯಾ ಕೋಟಾದಡಿ ಬರುವ ಎಲ್ಲ ಸ್ನಾತಕೋತ್ತರ ವೈದ್ಯಕೀಯ ಕಾಲೇಜುಗಳಲ್ಲಿ ಕೂಡ ಓಬಿಸಿ ವಿದ್ಯಾರ್ಥಿಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಲಾಗುವುದು.
ಹಾಗೇ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಶೇ. 10ರಷ್ಟು ಮೀಸಲಾತಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.ಪ್ರಸಕ್ತ 2021-22 ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ.
Key words: Good News – OBC Students-27% Reservation – Medical Education -Courses