ಬೆಂಗಳೂರು,ಜನವರಿ,18,2021(www.justkannada.in) : ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಉದ್ಧವ್ ಠಾಕ್ರೆ ಅವರ ಹೇಳಿಕೆ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂದಿರುವ ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿದ್ದು ಮಾತ್ರವಲ್ಲ, ಅಲ್ಲಿ ವಿಧಾನಸಭೆ ಅಧಿವೇಶನ ನಡೆಯಬೇಕೆಂದು ತೀರ್ಮಾನಿಸಲಾಯಿತು. ಸುವರ್ಣ ಸೌಧ ಮಹಾರಾಷ್ಟ್ರಕ್ಕೆ ಪ್ರತ್ಯುತ್ತರವಾಗಿ ನಿಂತಿರುವ ಒಂದು ನಿರ್ಮಿತಿ. ಅದನ್ನು ಅರಿಯುವ ವಿಚಾರದಲ್ಲಿ ನಮ್ಮಲ್ಲಿನ ಕೆಲವರೂ ಎಡವಿದ್ದಾರೆ ಎಂಬುದೂ ವಾಸ್ತವ. ಅದರ ಸಮರ್ಪಕ ಬಳಕೆಯಿಂದ ಮಾತ್ರ ಅದರ ಉದ್ದೇಶ ಸಾಕಾರ ಎಂದು ಹೇಳಿದ್ದಾರೆ.ಬೆಳಗಾವಿ ನಮ್ಮದೆಂಬ ಮಹಾರಾಷ್ಟ್ರಕ್ಕೆ ತಿರುಗೇಟು ನೀಡುವುದು ಒಂದೆಡೆ ಇರಲಿ. ಆದರೆ, ಅಲ್ಲಿನ ಜನರಲ್ಲಿ ಕನ್ನಡಾಭಿಮಾನ ಉತ್ಕಟವಾಗಿದೆ.
ಚಿಕ್ಕೋಡಿಯ ಕನ್ನಡ ಪ್ರೇಮಿಗಳಾದ ಸಿದ್ದಗೌಡ–ಅಶ್ವಿನಿ ಪಾಟೀಲ ದಂಪತಿ ತಮ್ಮ ಚೊಚ್ಚಲ ಮಗುವಿಗೆ ‘ಕನ್ನಡದ ವೃದ್ಧಿ’ ಎಂಬ ಹೆಸರಿಟ್ಟಾದರೆ. ಇದು ಅಲ್ಲಿನ ಕನ್ನಡಾಭಿಮಾನಕ್ಕೆ ಸಾಕ್ಷಿ. ಆ ದಂಪತಿಗೆ ನನ್ನ ನಮನ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
key words : Goodwill-threatened-Former CM-H.D.Kumaraswamy