ಬೆಂಗಳೂರು, ಫೆಬ್ರವರಿ,3,2023 (www.justkannada.in): ರಾಜ್ಯ ಸರ್ಕಾರವು ಇ-ಚಲಾನ್ ಪ್ರಕರಣಗಳೆಂದು ಕರೆಯಲ್ಪಡುವ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಕಾರಣದಿಂದಾಗಿ ವಿಧಿಸಿರುವ ದಂಡದ ಮೊತ್ತ ಬಾಕಿ ಇರುವ ಪ್ರಕರಣಗಳಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ನಿರ್ಧರಿಸಿದೆ.
ಜಸ್ಟೀಸ್ ಬಿ.ವೀರಪ್ಪ, ಕಾರ್ಯನಿರ್ವಾಹಕ ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಇವರ ಅಧ್ಯಕ್ಷತೆಯಲ್ಲಿ ಜನವರಿ 27, 2023ರಂದು ನಡೆದಂತಹ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಪ್ರಕಾರ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಒಂದು ಆದೇಶವನ್ನು ಹೊರಡಿಸಿದೆ.
ಈ ಸಂಬಂಧ ಸಾರಿಗೆ ಇಲಾಖೆಗೆ ಸಾಧ್ಯವಾದಷ್ಟು ಬೇಗ ಕ್ರಮಗಳನ್ನು ಕೈಗೊಳ್ಳುವಂತೆ ಈ ಸಭೆಯಲ್ಲಿ ನಿರ್ಧರಿಸಲಾಯಿತು ಹಾಗೂ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವುದನ್ನು ಖಾತ್ರಿಪಡಿಸಲು ಈ ಆದೇಶವನ್ನು ಪಾಲಿಸುವಂತೆ ಈ ಆದೇಶದಲ್ಲಿ ತಿಳಿಸಲಾಗಿತ್ತು.
ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್
Key words: government – 50% discount – payment -traffic fines -e-challan -cases.