ಬೆಂಗಳೂರು,ಜೂನ್,7,2022(www.justkannada.in): ಪ್ರಾಥಮಿಕ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ ಪಿಯು ಪಠ್ಯ ಪರಿಷ್ಕರಣಾ ನಿರ್ಧಾರವನ್ನ ಕೈಬಿಟ್ಟಿದೆ.
ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು. ಆದರೆ ಸಾಲುಸಾಲು ವಿವಾದಗಳು ಎದುರಾಗಿತ್ತು. ಇದೀಗ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರೋಹಿತ್ ಚಕ್ರತೀರ್ಥ ಅವರು ಪಠ್ಯ ಪರಿಷ್ಕರಿಸಿ ವರದಿ ಸಿದ್ಧಪಡಿಸಿದ್ಧರು. ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿತ್ತು.
ಈ ಮಧ್ಯೆ ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವಿಸರ್ಜಿಸುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. . ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ.
Key words: government-abandoned – PU -text –revision- decision.