ಬೆಂಗಳೂರು,ಡಿಸೆಂಬಬರ್,5,2020(www.justkannada.in): ‘ತೆರದಾಳದಲ್ಲಿ ಪುರಸಭೆ ಮಹಿಳಾ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣದಲ್ಲಿ ಮುಖ್ಯಮಂತ್ರಿಗಳಾಗಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಲಿ, ಬಿಜೆಪಿ ಮಹಿಳಾ ಸಂಘಟನೆಗಳಾಗಲಿ ಮೌನ ವಹಿಸಿರುವುದೇಕೆ?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ‘ಭ್ರೂಣ ಹತ್ಯೆ ಎಂದರೆ ಕೊಲೆಗೆ ಸಮ. ಜತೆಗೆ ಮಹಿಳೆಯರ ಮೇಲೆ ಹಲ್ಲೆ, ದೌರ್ಜನ್ಯ ನಡೆದಿದೆ. ಇದು ಮಾನಭಂಗ ಹಾಗೂ ದೌರ್ಜನ್ಯದ ಪ್ರಕರಣ. ಮಹಾಭಾರತದಲ್ಲಿ ದುಶ್ಶಾಸನನ ದೌರ್ಜನ್ಯ ಕಣ್ಣೆದುರು ಕಂಡಂತೆ ಈ ಪ್ರಕರಣವನ್ನು ಮಾಧ್ಯಮಗಳು ತೋರಿಸಿವೆ. ಆದರೂ ಈವರೆಗೂ ಪೊಲೀಸರು ಪ್ರಕರಣ ದಾಖಲಿಸಿ, ಯಾರೊಬ್ಬರನ್ನೂ ಬಂಧಿಸಿಲ್ಲ ಎಂದು ಕಿಡಿ ಕಾರಿದರು.
ಮುಖ್ಯಮಂತ್ರಿಗಳಾಗಲಿ, ಮಹಿಳಾ ಸಚಿವರಾಗಲಿ, ಶೋಭಾ ಕರಂದ್ಲಾಜೆ ಅವರಾಗಲಿ, ದೇಶದಲ್ಲಿರುವ ಮಹಿಳಾ ಸಂಘಟನೆಗಳಾಗಲಿ ಯಾರೊಬ್ಬರೂ ಈ ಬಗ್ಗೆ ಬಾಯಿ ಬಿಟ್ಟಿಲ್ಲ. ಇದು ಕೇವಲ ದೇಶ ಮಟ್ಟದಲ್ಲ, ಅಂತಾರಾಷ್ಟ್ರೀಯ ಮಟ್ಟದ ಪ್ರಕರಣ. ಬಿಜೆಪಿಯವರು ದೌರ್ಜನ್ಯ ಎಸಗಿದ ತಮ್ಮ ಶಾಸಕನ ರಕ್ಷಣೆಗಾಗಿ ನಿಂತಿರುವುದು ನಾಚಿಕೆಗೇಡಿನ ವಿಚಾರ. ಮುಖ್ಯಮಂತ್ರಿಗಳೇ ಇದೇ ಪರಿಸ್ಥಿತಿ ನಿಮ್ಮ ಮನೆಯ ಹೆಣ್ಣುಮಕ್ಕಳಿಗೆ ಬಂದಿದ್ದರೆ, ಶೋಭಾ ಕರಂದ್ಲಾಜೆ ಅವರೇ ಹಾಗೂ ಶಶಿಕಲಾ ಜೊಲ್ಲೆ ಅವರೇ ನಿಮಗೆ ಈ ರೀತಿ ಆಗಿದ್ದರೆ ಏನು ಮಾಡುತ್ತಿದ್ದಿರಿ ಎಂದು ಪ್ರಶ್ನಿಸಿದರು.
ಈ ವಿಚಾರವಾಗಿ ನಾನು, ನಮ್ಮ ವಿರೋಧ ಪಕ್ಷದ ನಾಯಕರು ಹಾಗೂ ಮಹಿಳಾ ಶಾಸಕರು ಇಂದು ತೆರದಾಳಕ್ಕೆ ಹೋಗಿ ಸಂತ್ರಸ್ತರ ಪರ ನಿಲ್ಲಲು ನಿರ್ಧರಿಸಿದ್ದೇವೆ. ಅಧಿವೇಶನದಲ್ಲೂ ಈ ವಿಚಾರವಾಗಿ ನಮ್ಮ ಹೋರಾಟ ಮುಂದುವರಿಸುತ್ತೇವೆ. ಈ ಪ್ರಕರಣ ಮಾನವೀಯತೆ ಹಾಗೂ ಹೆಣ್ಣಿನ ಕುಲಕ್ಕೆ ಮಾಡಿರುವ ಅಪಮಾನ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯೇ ಆ ಘಟನೆಗೆ ಕಾರಣರಾದವರ ಬಗ್ಗೆ ಹೇಳಿದ ನಂತರವೂ ಇನ್ನು ಅವರನ್ನು ಬಂಧಿಸಿಲ್ಲ ಎಂದರೆ, ಈ ಸರ್ಕಾರದಲ್ಲಿ ಮಹಿಳೆಯರಿಗೆ ಯಾವ ರೀತಿಯ ರಕ್ಷಣೆ, ಗೌರವ ಸಿಗುತ್ತದೆ ಎಂಬುದು ಗೊತ್ತಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ಛೇಡಿಸಿದರು.
ಅಧಿಕಾರಕ್ಕಾಗಿ ಸಮಾಜ ಒಡೆಯಲಾಗುತ್ತಿದೆ:
ಬಿಜೆಪಿಯು ಅಧಿಕಾರಕ್ಕಾಗಿ ಸಮಾಜವನ್ನು ಜಾತಿ, ಧರ್ಮ ಹಾಗೂ ಇತರೆ ವಿಚಾರವಾಗಿ ಒಡೆದು ಆಳುತ್ತಿದೆ. ಈ ಬಗ್ಗೆ ನಾನು ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಪ್ರಾಧಿಕಾರ ರಚನೆ ವಿಚಾರವಾಗಿ ನಾವು ಈಗಲೇ ಮಾತನಾಡುವುದಿಲ್ಲ. ಅದನ್ನು ಯಾವ ಕಾರಣಕ್ಕಾಗಿ ಮಾಡಿದ್ದಾರೆ? ಬಡವರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ರಾಜಕೀಯ ಉದ್ದೇಶದಿಂದ ಮಾಡುವುದು ಸರಿಯಲ್ಲ. ಈ ಬಗ್ಗೆ ಪ್ರಜಾಪ್ರಭುತ್ವದ ಭಾಗವಾಗಿರುವ ಮಾಧ್ಯಮಗಳೇ ಜನರಿಗೆ ಬೆಳಕು ಚೆಲ್ಲಬೇಕು’ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. .
‘ಇನ್ನು ಲವ್ ಜಿಹಾದ್ ಹಾಗೂ ಗೋಹತ್ಯೆ ನಿಷೇಧ ಕಾನೂನು ವಿಚಾರವಾಗಿ ನಾನು ಮಾಧ್ಯಮಗಳ ವರದಿಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಹೇಳಿದರು.
English summary…
“Why is the government, BJP Women’s Organisations silent over Teradala incident? DKS
Bengaluru, Dec. 5, 2020 (www.justkannada.in): KPCC President D.K. Shivakumar today questioned why the Chief Minister, Women and Child Development Minister, and the BJP Women’s organisations are silent over the incident of violence on the Teradala Municipality Woman councilor?
“Foeticide is equal to murder. Moreover, the incident also involves an assault on women. This is a case of rape and violence, which were shown in electronic medical like the Dushyasanas incident in Mahabharata. Despite this the police have not registered any case or held anyone,” he alleged.
“The opposition leaders and women elected representatives have decided to go to Teradala and support the victim. We will also continue to fight against this even in the assembly,” he explained.Keywords: Teradala incident/ D K Shivakumar
Key words: government – BJP women’s organizations -silent – Teradela case- DK Shivakumar -Question.