ಬೆಂಗಳೂರು,ಜನವರಿ,5,2022(www.justkannada.in): ಸರ್ಕಾರ ಯಾವುದೇ ರೂಲ್ಸ್ ಮಾಡಿದ್ರೂ ಪಾದಯಾತ್ರೆ ಮಾಡಿಯೇ ತೀರುತ್ತೇವೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಸರ್ಕಾರ ಕಠಿಣ ನಿಯಮಗಳನ್ನ ಜಾರಿ ಮಾಡಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಅಡ್ಡಿಪಡಿಸಲು ಈ ನಿಯಮಗಳನ್ನ ಜಾರಿ ಮಾಡಲಾಗುತ್ತಿದೆ ಎಂಬುದು ಕಾಂಗ್ರೆಸ್ ನಾಯಕರ ಆರೋಪವಾಗಿದೆ.
ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡುತ್ತೇವೆ. ನಾವು ರಾಜ್ಯದ ಜನರನ್ನ ಉಳಿಸುವ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ. ಪಾದಯಾತ್ರೆ ನಿಲ್ಲಿಸಲು ಟಫ್ ರೂಲ್ಸ್ ತಂದ್ರಾ. ಪಾದಯಾತ್ರೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕು. ಸ್ಯಾನಿಟೈಸ್ ಮಾಡಿಕೊಳ್ಳಬೇಕು, ಅಂತರ ಕಾಯ್ದುಕೊಳ್ಳಬೇಕು ಎಂಬ ಕೊರೋನಾ ನಿಯಮ ಪಾಲಿಸುತ್ತೇವೆ ಎಂದರು.
ವೀಕೆಂಡ್ ಲಾಕ್ ಡೌನ್ ಇದ್ದರೂ ಜನವರಿ 9ರಿಂದ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿದ್ಧರಾಮಯ್ಯ ತಿಳಿಸಿದರು.
Key words: government – covid rules-Former CM -Siddaramaiah.