ಬೆಂಗಳೂರು,ಜುಲೈ,14,2023(www.justkannada.in): ಹಾಲಿನ ದರ ಹೆಚ್ಚಳಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ಧಾರೆ.
ಈ ಕುರಿತು ಮಾತನಾಡಿರುವ ಮಾಜಿ ಸಚಿವ ಆರ್.ಅಶೋಕ್, ಸರ್ಕಾರದಿಂದ ಹಾಲಿನ ದರ 5 ರೂ.ಯಿಂದ 6ರೂ.ಗೆ ಹೆಚ್ಚಿಸುವ ನಿರ್ಧಾರ ಇದೆ. ಒಂದು ಕೈಯ್ಯಲ್ಲಿ ಕೊಟ್ಟು, ಎರಡು ಕೈಯಲ್ಲಿ ಬಾಚಿಕೊಳ್ಳುವ ಕೆಲಸ ಮಾಡಲಾಗುತ್ತಿದೆ. ಬಿಟ್ಟಿ ಸಲಹೆ ಕಾಂಗ್ರೆಸ್ ಶಾಸಕರೊಬ್ಬರು ಸದನದಲ್ಲಿ ಕೊಟ್ಟರು. ಕರ್ನಾಟಕದಲ್ಲಿ ಬೆಲೆ ಏರಿಕೆಯಿಂದ ಜನ ಪರಿತಪಿಸಬೇಕಾಗಿದೆ. ಎಲ್ಲ ದರ ಹೆಚ್ಚಾದರೇ ಜನ ಹೇಗೆ ಬದುಕಬೇಕು ಕಿಡಿಕಾರಿದರು.
ಈಗಾಗಲೇ ಟೊಮ್ಯಾಟೊ ಸೇರಿ ಹಲವು ವಸ್ತುಗಳ ದರ ಏರಿಕೆಯಾಗಿದೆ. ಈ ವೇಳೆ ಸರ್ಕಾರ ಹಾಲಿನ ದರ ಏರಿಕೆ ಮಾಡಲು ಹೊರಟಿದೆ. ಸರ್ಕಾರ ಒಂದು ಕೈನಲ್ಲಿ ಕೊಟ್ಟು ಎರಡು ಕೈಗಳಿಂದ ಕಿತ್ತುಕೊಳ್ಳುತ್ತಿದೆ ಎಂದು ಗುಡುಗಿದರು.
Key words: Government- decision – increase – price – milk-Former Minister- R. Ashok