ಬೆಂಗಳೂರು,ಏಪ್ರಿಲ್,23,2021(www.justkannada.in): ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಇಂದು ಟ್ವೀಟ್ ಮಾಡಿ ಹರಿಹಾಯ್ದಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೋನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೊರೊನಾ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರಕಾರ ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ.
ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ.ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕೊರೊನಾ ಸೋಂಕಿತರಿಗೆ ಬೆಡ್ ಗಳನ್ನು, ಆಕ್ಸಿಜನ್, ವೆಂಟಿಲೇಟರ್, ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ರಾಜ್ಯ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು. ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ ಎಂದು ಹೆಚ್.ಡಿಕೆ ಬೇಸರ ವ್ಯಕ್ತಪಡಿಸಿದ್ದಾರೆ.
ENGLISH SUMMARY…
Govt. has failed in making arrangements for cremation of COVID infected dead bodies: Former CM HDK expresses displeasure
Bengaluru, Apr. 23, 2021 (www.justkannada.in): Former Chief Minister H.D. Kumaraswamy today alleged that the State Government has completely failed in making arrangements to conduct cremations of the COVID infected dead bodies in a dignified manner.
The former CM in his tweet has expressed ire upon the State Government stating that the State Government is so hopeless that it can’t even make arrangements to conduct cremations of the COVID infected dead bodies in a dignified way. It shows its absolute irresponsibility and negligence.
He demanded the State Government to awaken at least now and make immediate arrangements to conduct cremations of the persons who have died of COVID infection in the deemed forest areas spread towards all directions surrounding Bengaluru. At least 25 bodies can be cremated in each place, he explained.
“There are drylands in all the directions on the outskirts of Bengaluru. Hence, the State Government should make immediate arrangements for the cremation of the bodies in a dignified way. The government should give first preference to this,” he has demanded.
“The government has utterly failed in managing the pandemic. I request it at least to make arrangements to conduct the cremations properly,” his tweet read.
Keywords: Former Chief Minister H.D. Kumaraswamy/ outskirts of Bengaluru/ all the directions/ demands arrangement to cremate COVID infected dead bodies in a dignified manner
Key words: government – failed – arrange – funeral – corona-former-HD Kumaraswamy