ಬೆಂಗಳೂರು, ಅಕ್ಟೋಬರ್ 21,2023(www.justkannada.in): ‘ರಾಜ್ಯದಲ್ಲಿ ಸಾಮರ್ಥ್ಯಕ್ಕೆ ತಕ್ಕಷ್ಟು ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಸರ್ಕಾರದ ಹೇಳಿಕೆ ಪ್ರಕಾರವೇ ಕೊರತೆ ಇರುವುದು 3 ಕೋಟಿ ಯುನಿಟ್ ಅಷ್ಟೇ. ಕೃತಕ ಅಭಾವ ಸೃಷ್ಟಿ ಮಾಡಿರುವುದು ಸರ್ಕಾರ. ವಿದ್ಯುತ್ ಉತ್ಪಾದನೆ ಬಗ್ಗೆ ಗಮನವನ್ನೇ ಕೊಡಲಿಲ್ಲ. ನನ್ನ ಕಾಲದಲ್ಲಿ ಕೃತಕ ಅಭಾವ ಸೃಷ್ಟಿ ಮಾಡಿದ್ದೀವಾ? ದಾಖಲೆ ತೆಗೆಯಿರಿ ಎಂದು ಕಿಡಿಕಾರಿದರು.
ಗ್ಯಾರಂಟಿ ಜಾರಿ ಮಾಡಿದ್ದೇವೆ, ನುಡಿದಂತೆ ನಡೆದಿದ್ದೇವೆ ಎಂದು ಕಾಂಗ್ರೆಸ್ ನವರು ಹೇಳಿಕೊಂಡು ತಿರುಗುತ್ತಿದ್ದಾರೆ. ಅದರ ಪ್ರಚಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅದಕ್ಕೊದಿಷ್ಟು ದುಡ್ಡು ಖರ್ಚು ಮಾಡುತ್ತಿದ್ದಾರೆ. ಬರೀ ಇಷ್ಟರಲ್ಲೇ ಸಮಯ ಕಳೆಯುತ್ತಿದ್ದಾರೆಯೇ ವಿನಃ ವಿದ್ಯುತ್ ಉತ್ಪಾದನೆ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಲೇ ಇಲ್ಲ ಎಂದು ಹೆಚ್.ಡಿಕೆ ಹರಿಹಾಯ್ದರು.
Key words: government – failed – electricity – per- capacity- former CM-HD Kumaraswamy