ಬೆಂಗಳೂರು,ಜ,29,2020(www.justkiannada.in): ಬಿಜೆಪಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಗ್ಗಂಟಾಗಿರುವ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಯಾರನ್ನೂ ಸಮಾಧಾನಪಡಿಸಲು ಆಗಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಡಾ.ಜಿ.ಪರಮೇಶ್ವರ್, ರಾಜ್ಯಬಿಜೆಪಿ ಸರ್ಕಾರದಲ್ಲಿ ಸಂಪುಟ ವಿಸ್ತರಣೆಯಲ್ಲಿ ಗೊಂದಲ ಇದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡಲು ವಿಳಂಬ ಮಾಡುತ್ತಿದ್ದಾರೆ. ಶಾಸಕ ಸ್ಥಾನ ತ್ಯೆಜಿಸಿದ 17 ಮಂದಿಗೂ ಸಚಿವ ಸ್ಥಾನ ನೀಡುವುದಾಗಿ ಸಿಎಂ ಬಿಎಸ್ ವೈ ಹೇಳಿದ್ದಾರೆ. 17 ಮಂದಿ ಪೈಕಿ ಯಾರಿಗೆ ಮಂತ್ರಿಗಿರಿ ನೀಡುತ್ತಾರೆ. ಸಂಪುಟ ವಿಸ್ತರಣೆಯಾದ ನಂತರ ಯಾರು ಏನು ಹೇಳುತ್ತಾರೆ. ಯಾರು ಸಿಡಿಯುತ್ತಾರೆ ಎಂಬುದನ್ನ ಕಾದು ನೋಡುತ್ತೇವೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್ , ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕ ಹೈಕಮಾಂಡ್ ಗೆ ಒತ್ತಡ ಹಾಕಿದ್ದೇವೆ. ಆದರೇ ಹೈಕಮಾಂಡ್ ದೆಹಲಿ ಚುನಾವಣೆಯಲ್ಲಿ ಬಿಜಿಯಾಗಿದೆ. ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ. ಆಡಳಿತ ಯಂತ್ರ ಕುಸಿದಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಈ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಬೇಕಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕೆ ಒತ್ತಡ ಹಾಕಿದ್ದೇವೆ ಎಂದು ತಿಳಿಸಿದರು.
Key words: Government –inactive- CM BSY – not – appease -Former DCM -Dr G Parameshwar