ಬೆಂಗಳೂರು,ಡಿ,7,2019(www.justkannada.in): ಹೊರರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಕಲಿಯುತ್ತಿರುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ನಮ್ಮ ಸರ್ಕಾರ ಬದ್ಧ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ 2019-20ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಹೊರರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವವರಿಗೆ ವಿದ್ಯಾರ್ಥಿ ವೇತನ ನೀಡುತ್ತಿರುವುದು ಉತ್ತಮ ಕಾರ್ಯ. 18 ವರ್ಷಗಳಿಂದ ಈ ಉತ್ತಮ ಕಾಯಕ ನಡೆಯುತ್ತಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಇದು ನಿಜಕ್ಕೂ ದೊಡ್ಡ ವ್ಯತ್ಯಾಸ ಮಾಡುತ್ತಿದೆ,”ಎಂದರು.
“ಹೊರ ರಾಜ್ಯದಲ್ಲಿ ಕನ್ನಡದ ಕೆಲಸ ಮಾಡುತ್ತಿರುವ, ಕನ್ನಡ ಕಲಿಯುತ್ತಿರುವವರಿಗೆ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿವಾಗಿ ಶಕ್ತಿ ತುಂಬುವ ಕೆಲಸ ಆಗುತ್ತಿದೆ. ಕನ್ನಡದ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವುದು ಸರ್ಕಾರದ ಕರ್ತವ್ಯ. ಇದಕ್ಕೆ ನಾವು ಬದ್ಧ,” ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.
Key words: Government- promote- Kannada- learning – Outer State – DCM -.N. Ashwaththanarayan