ಬೆಂಗಳೂರು,ಆ,10,2020(www.justkannada.in): ರಾಜ್ಯದಲ್ಲಿ ಸುರಿದ ಮಹಾಮಳೆಗೆ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು ಈ ಹಿನ್ನೆಲೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ನಷ್ಟದ ವರದಿ ಸಿದ್ಧಪಡಿಸಿದೆ ಎಂದು ಹೇಳಲಾಗುತ್ತಿದೆ.
ಕೊಡಗಿನಲ್ಲಿ ಮಹಾಮಳೆಯಿಂದಾಗಿ 2 ಸಾವಿರ ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. ಹಾಗೆಯೇ ಚಿಕ್ಕಮಗಳೂರಿನಲ್ಲಿ 1 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಸರ್ಕಾರ ಅಂದಾಜಿಸಿದ್ದು ಎನ್ ಡಿಆರ್ ಎಫ್ ಅಡಿ ತಕ್ಷಣ ಪರಿಹಾರ ಬಿಡುಗಡೆ ಮಾಡಲು ಮನವಿ ಮಾಡಿದೆ. ಮೊದಲ ಕಂತಿನ ಹಣ ಪಾವತಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಒತ್ತಡ ಹಾಕಲಿದೆ.
ಇನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಈ ವೇಳೆ ಮಳೆಯಿಂದಾಗಿ ಆಗಿರುವ ಹಾನಿ ಬಗ್ಗೆ ಪ್ರಧಾನಿ ಮೋದಿಯ ಮುಂದೆ ರಾಜ್ಯ ಸಚಿವರು ಪ್ರಸ್ತಾಪಿಸಿ ಪರಿಹಾರಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.
Key words: Government – rain-loss- report-NDRF – immediate -relief.