ಬೆಂಗಳೂರು,ಜುಲೈ,16,2022(www.justkannada.in): ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಚಿತ್ರೀಕರಣ ನಿಷೇಧಿಸಿ ನಂತರ ಆದೇಶ ಹಿಂಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಆಡಳಿತ ಮಾಡುವವರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಹೀಗೆ ಮಾಡಬಾರದು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಇದ್ದರೆ ಪ್ರಜಾಪ್ರಭುತ್ವ ಎಂದರು.
ಪಿಎಸ್ಐ ಹಗರಣ ವಿಚಾರದಲ್ಲಿ ಹೋಟಲ್ ಮೆನು ಕಾರ್ಡ್ ರೀತಿ ಹಾಕಿದ್ದರು. ಯಾವ ಯಾವ ಹುದ್ದೆಗೆ ಎಷ್ಟು ಹಣ ಅಂತ. ಕೋವಿಡ್ ಕೆಲಸಕ್ಕೆ ನಮ್ಮ ಕಾರ್ಯಕರ್ತರು ಹಣ ನೀಡಿದ್ದಾರೆ. ನಿಮ್ಮ ಕೈಯಲ್ಲಿ ಮಾಡಲಾಗದ ಕೆಲಸವನ್ನು ನಾವು ಮಾಡಿದ್ದೇವೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮೋತ್ಸವ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ನಾನು ಪಕ್ಷದ ಸಿಪಾಯಿ, ನನಗೆ ಸೋನಿಯಾ ಗಾಂಧಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ನನಗೂ ಇತಿ ಮಿತಿ ಇದೆ. ಯಾರಿಗೆ ಕೇಳಬೇಕೋ ಅವರನ್ನ ಕೇಳಿ ಎಂದು ಹೇಳಿದರು.
Key words: government-responsibly-KPCC-president-DK Shivakumar