ಬೆಂಗಳೂರು, ಏಪ್ರಿಲ್ 25, 2021 (www.justkannada.in): ಬೆಂಗಳೂರಿನಲ್ಲಿ 2 ಸಾವಿರ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಇದರ ಕೊರೋನವೈರಸ್ ರೋಗಿಗಳಿಗೆ ಶೇ .80 ರಷ್ಟು ಹಾಸಿಗೆಗಳನ್ನು ಕಾಯ್ದಿರಿಸಲು ಖಾಸಗಿ ಸೌಲಭ್ಯಗಳಿಗೆ ಸರಕಾರ ಆದೇಶಿಸಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ಹದಿನೈದು ದಿನಗಳಲ್ಲಿ ಬೆಂಗಳೂರು ಮತ್ತು ಇತರೆಡೆ ಐಸಿಯು ಮತ್ತು ವೆಂಟಿಲೇಟರ್‌ನೊಂದಿಗೆ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸುಮಾರು 250 ಹಾಸಿಗೆಗಳ ಸಾಮರ್ಥ್ಯವಿರುವ ಮಾಡ್ಯುಲರ್ ಐಸಿಯು ಹೊಂದಿರುವ ತಾತ್ಕಾಲಿಕ ಆಸ್ಪತ್ರೆಗಳನ್ನು ಮೈಸೂರು, ಹುಬ್ಬಳ್ಳಿ, ಬೀದರ್, ಬೆಳಗಾವಿ ಮತ್ತು ಶಿವಮೊಗ್ಗಗಳಲ್ಲಿ ಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.